ಸಮರಸ ಚಿತ್ರಸುದ್ದಿ: ಬದಿಯಡ್ಕ: ನೆಕ್ರಾಜೆ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಮಹೋತ್ಸವದ ಸಂದರ್ಭದಲ್ಲಿ ಉದ್ಯಮಿ ಶಿವಶಂಕರ್ ನೆಕ್ರಾಜೆ (ದುಬೈ) ಅವರನ್ನು ವೈಷ್ಣವಿ ನಾಟ್ಯಾಲಯದ ಪೋಷಕರ ವತಿಯಿಂದ ಸನ್ಮಾನಿಸಲಾಯಿತು. ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ, ಪ್ರಸಿದ್ಧ ಗಾಯಕ ವಿದ್ವಾನ್ ವೆಳ್ಳಿಕೋತ್ ವಿಷ್ಣು ಭಟ್ ನಾಟ್ಯಾಲಯದ ಪರವಾಗಿ ದಂಪತಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ವೈಷ್ಣವಿ ನಾಟ್ಯಾಲಯದ ನಿರ್ದೇಶಕಿ ಯೋಗೀಶ್ವರಿ ಜಯಪ್ರಕಾಶ್ ಜೊತೆಗಿದ್ದರು.