HEALTH TIPS

ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ

           ನವದೆಹಲಿ: ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅವರನ್ನು ಗುರುವಾರ ನೇಮಕ ಮಾಡಲಾಗಿದೆ.

                ಈ ಬಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

               ಹಾಲಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರ ಅಧಿಕಾರ ಮೇ 14ರಂದು ಕೊನೆಗೊಳ್ಳಲಿದೆ. ಇವರ ಸ್ಥಾನಕ್ಕೆ ರಾಜೀವ್ ಕುಮಾರ್ ಅವರನ್ನು ನೇಮಿಸಲಾಗಿದೆ. ಮೇ 15 ರಂದು ರಾಜೀವ್‌ ಕುಮಾರ್‌ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

             'ಕಾನೂನು ಸಚಿವಾಲಯ ಹೊರಡಿಸಿದ ಮೇ 12ರ ಅಧಿಸೂಚನೆಯ ಪ್ರಕಾರ ಸಂವಿಧಾನದ 324ನೇ ವಿಧಿಯ ಷರತ್ತು (2) ರ ಅನುಸಾರವಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಈ ನೇಮಕಾತಿ ಮಾಡಿದ್ದಾರೆ. ರಾಜೀವ್‌ ಕುಮಾರ್‌ ಅವರಿಗೆ ಶುಭಾಶಯಗಳು' ಎಂದು ಸಚಿವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

              ರಾಜೀವ್ ಕುಮಾರ್ ಅವರು ಜಾರ್ಖಂಡ್ ಕೇಡರ್‌ನ 1984ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ಅವರು 2020ರಲ್ಲಿ ಭಾರತ ಚುನಾವಣಾ ಆಯೋಗದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮುನ್ನ ಅವರು ಸಾರ್ವಜನಿಕ ಉದ್ಯಮಗಳ ಮಂಡಳಿ, ಜಾರ್ಖಂಡ್‌ ಆಡಳಿತಾತ್ಮಕ ಸೇವೆ, ಕೇಂದ್ರ ಹಣಕಾಸು ಸಚಿವಾಲಯದ ಪ್ರಮುಖ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ.

             ರಾಜೀವ್‌ ಕುಮಾರ್‌ ಅವರು 1960ರಲ್ಲಿ ಜಾರ್ಖಂಡ್‌ ರಾಜ್ಯದಲ್ಲಿ ಜನಿಸಿದರು. ಅವರು ಬಿಎಸ್ಸಿ, ಎಲ್‌ಎಲ್‌ಬಿ ಹಾಗೂ ಪಿಜಿಡಿಎಂ ಪದವಿ ಪಡೆದಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries