ತಿರುವನಂತಪುರ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಭ್ರಷ್ಟಾಚಾರ ನಿರ್ಮೂಲನೆಯಾಗಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒಪ್ಪಿಕೊಂಡಿದ್ದಾರೆ. ರಾಜ್ಯದ ಹಲವು ಸ್ಥಳೀಯ ಸಂಸ್ಥೆಗಳಲ್ಲಿ ಇನ್ನೂ ದುರಾಸೆಯ ಜನರಿದ್ದಾರೆ ಎಂದು ಸಿಎಂ ಹೇಳಿದರು. ಮುಖ್ಯಮಂತ್ರಿ ಹೇಳುವಂತೆ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ದುರಾಸೆಗೆ ಒಳಗಾಗಿ ಸದ್ದಿಲ್ಲದೆ ಕೆಲಸ ಮಾಡುವ ಬದಲು ದೊಡ್ಡ ಮಟ್ಟದಲ್ಲಿ ಹಣ ಕೇಳುವ ಗುಂಪು ಇದೆ ಎಮದವರು ಒಪ್ಪಿಕೊಂಡಿರುವರು.
ಶ್ರೀನಾರಾಯಣ ಗುರು ಮುಕ್ತ ವಿಶ್ವವಿದ್ಯಾನಿಲಯ, ಕೇರಳ ಸ್ಥಳೀಯ ಆಡಳಿತ ಸಂಸ್ಥೆ ಮತ್ತು ಕೇರಳ ಡಿಜಿಟಲ್ ವಿಜ್ಞಾನಗಳ ಆವಿಷ್ಕಾರ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಕೊಲ್ಲಂನಲ್ಲಿ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಫೆಲೋಶಿಪ್, ಅಧ್ಯಯನ ಉತ್ಸವ ಮತ್ತು ಪದವಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆಲವರು ಭ್ರಷ್ಟಾಚಾರ ತಮ್ಮ ಹಕ್ಕು ಎಂದು ಭಾವಿಸುತ್ತಾರೆ. ಈ ವಿಷಯಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಲಿದೆ. ಭ್ರಷ್ಟಾಚಾರವನ್ನು ನೇರವಾಗಿ ಪ್ರಶ್ನಿಸುವ ಜನರೂ ಇದ್ದಾರೆ. ಸ್ಥಳೀಯಾಡಳಿತ ಸಂಸ್ಥೆಗಳು ಕಂಡೂ ಕಾಣದ ಹಾಗೆ ವರ್ತಿಸಬಾರದು ಎಂದು ಸಿಎಂ ಹೇಳಿದರು.
ಅಂತಹವರು ಎಲ್ಲಿಗೆ ಇರಬೇಕೆಂದು ಎಲ್ಲರಿಗೂ ತಿಳಿದಿದೆ ಮತ್ತು ನಂತರ ಅವರು ಅಲ್ಲಿಗೆ ಹೋಗಬೇಕಾಗುತ್ತದೆ ಎಂದು ಅವರು ಹೇಳಿದರು.
ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಪೆÇ್ರೀತ್ಸಾಹಿಸುವುದಿಲ್ಲ. ಈ ವಿಷಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಈ ವಿಚಾರದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮಧ್ಯಪ್ರವೇಶಿಸಬೇಕು ಎಂದು ಸಿಎಂ ಹೇಳಿದರು.