ನವದೆಹಲಿ: ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರನ್ನು 75 ನೇ ವಿಶ್ವ ಆರೋಗ್ಯ ಅಧಿವೇಶನದ ಪ್ರಮುಖ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ನವದೆಹಲಿ: ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರನ್ನು 75 ನೇ ವಿಶ್ವ ಆರೋಗ್ಯ ಅಧಿವೇಶನದ ಪ್ರಮುಖ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ವಿಶ್ವ ಆರೋಗ್ಯ ಅಧಿವೇಶನವು ಸಮಿತಿ- ಎ ಮತ್ತು ಸಮಿತಿ- ಬಿ ಎಂಬ ಎರಡು ಸಮಿತಿಗಳ ಮೂಲಕ ಕಾರ್ಯನಿರ್ವಹಿಸುತ್ತದೆ.
ಸಮಿತಿ- ಎ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ತಾಂತ್ರಿಕ ಮತ್ತು ಆರೋಗ್ಯ ವಿಷಯಗಳ ಬಗ್ಗೆ ಹಾಗೂ ಸಮಿತಿ- ಬಿ ಪ್ರಾಥಮಿಕವಾಗಿ ಸಂಸ್ಥೆಯ ಆಡಳಿತಾತ್ಮಕ ಮತ್ತು ಹಣಕಾಸಿನ ವಿಷಯಗಳ ಕುರಿತು ಚರ್ಚಿಸುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
194 ಸದಸ್ಯ ರಾಷ್ಟ್ರಗಳು ಭಾಗವಹಿಸಿರುವ ಡಬ್ಲ್ಯುಎಚ್‌ಒ ಅಧಿವೇಶನವು ಸ್ವಿಟ್ಜರ್ಲೆಂಡ್‌ನ ಜಿನೀವಾದಲ್ಲಿ ಮೇ 22 ರಿಂದ ಆರಂಭವಾಗಿದ್ದು, ಮೇ 28 ರವರೆಗೆ ನಡೆಯಲಿದೆ. ಪ್ರತಿ ವರ್ಷ ಅಧಿವೇಶನದಲ್ಲಿ ಆರೋಗ್ಯ ವಿಷಯ ಕುರಿತ ಸವಾಲುಗಳು ಮತ್ತು ಜವಾಬ್ದಾರಿಗಳ ಬಗ್ಗೆ ಪರಿಶೀಲನೆ ನಡೆಯುತ್ತದೆ.