ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲಿಟ್ಟರ್‌ನಲ್ಲಿ ಇಂದು ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಾಗರಿಕ ಸಾವನ್ನಪ್ಪಿದ್ದಾನೆ.
ಇಂದು ಮಧ್ಯಾಹ್ನ ದಕ್ಷಿಣ ಕಾಶ್ಮೀರದ ಶೋಪಿಯಾನ್‌ನಲ್ಲಿ ತುರ್ಕವಾಂಗಮ್‌ನಿಂದ ಲಿಟ್ಟರ್ ಸಂಪರ್ಕಿಸುವ ಸೇತುವೆಯ ಬಳಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ವಿಶೇಷ ಕಾರ್ಯಾಚರಣೆ ದಳದ (ಎಸ್‌ಒಜಿ) 182 ನೇ ಬೆಟಾಲಿಯನ್ ಜಂಟಿ ಗಸ್ತು ತಂಡದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಶೋಪಿಯಾನ್‌ನ ತುರ್ಕವಾಂಗಮ್ ನಿವಾಸಿ ಶೋಯೆಬ್ ಅಹ್ಮದ್ ಘನಿ ಗಾಯಗೊಂಡಿದ್ದು ಪುಲ್ವಾಮಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಹೇಳಿದರು.
ಸ್ವಲ್ಪ ಸಮಯದ ನಂತರ ಭಯೋತ್ಪಾದಕರು ಹತ್ತಿರದ ತೋಟಗಳಲ್ಲಿ ಅಡಗಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.