ದುಬೈ: ದೂರದ ದುಬೈನಲ್ಲಿ ನಿಗೂಢವಾಗಿ ಮೃತಪಟ್ಟ ಕೇರಳದ ಪ್ರಖ್ಯಾತ ವ್ಲಾಗರ್ ಮತ್ತು ಮಲಯಾಳಂ ಆಲ್ಬಂ ಸ್ಟಾರ್ ರಿಫಾ ಮೆಹ್ನು (21) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸಂಗತಿಯೊಂದ ತಿಂಗಳುಗಳ ಬಳಿಕ ಹೊರಬಿದ್ದಿದೆ.
ರಿಫಾ ಮೆಹ್ನು ಪತಿ ಹಾಗೂ ಆರೋಪಿ ಮೆಹ್ನಾಜ್ ವಿರುದ್ಧ ವಕೀಲ ಪಿ.
ಇದರ ನಡುವೆ ಕಳೆದ ಶನಿವಾರವಷ್ಟೇ ರಿಫಾ ಶವವನ್ನು ಸಮಾಧಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ರಿಫಾ ಅವರ ಮರಣೋತ್ತರ ಪರೀಕ್ಷೆಯ ವರದಿಯನ್ನು ಇಂದು ಪೊಲೀಸರಿಗೆ ಸಲ್ಲಿಸುವ ಸಾಧ್ಯತೆ ಇದೆ. ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿನ ಫೊರೆನ್ಸಿಕ್ ಲ್ಯಾಬ್ ಇಂದು ಆಕೆಯ ಆಂತರಿಕ ಅಂಗಗಳ ರಾಸಾಯನಿಕ ಪರೀಕ್ಷೆ ನಡೆಸಲಿದೆ.
ಅಂದಹಾಗೆ ರಿಫಾ, ಕೇರಳದ ಕೊಯಿಕ್ಕೋಡ್ ನಗರದ ಬಲುಸ್ಸೆರಿ ಮೂಲದ ನಿವಾಸಿ. ದುಬೈನ ಜಫ್ಫಿಲಿಯಾದಲ್ಲಿರುವ ಫ್ಲ್ಯಾಟ್ನಲ್ಲಿ ಮಾರ್ಚ್ 1ರಂದು ಶವವಾಗಿ ಪತ್ತೆಯಾಗಿದ್ದರು. ಆದರೆ, ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ, ಏನೋ ನಡೆದಿದೆ ಎಂದು ಅನುಮಾನ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು. ಅಲ್ಲದೆ, ಪತಿ ಮೆಹ್ನಾಜ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಆರೋಪ ಮಾಡಿದ್ದರು.
ರಿಫಾ ಅವರು ಆಹಾರ ಮತ್ತು ಫ್ಯಾಶನ್ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದರು. ಕೇರಳದಲ್ಲಿ ತುಂಬಾ ಪ್ರಸಿದ್ಧಿಯನ್ನು ಪಡೆದಿದ್ದರು. ಸದಾ ಸಾಮಾಜಿಕ ಜಾಲತಾಣದಲ್ಲಿ ರಿಫಾ ಬಿಜಿಯಾಗಿರುತ್ತಿದ್ದರು. ಸಾವಿಗೂ ಕೆಲವು ಕ್ಷಣಗಳ ಹಿಂದೆಯೂ ಆಕೆ ಜಾಲತಾಣದಲ್ಲಿ ಸಕ್ರೀಯರಾಗಿದ್ದರು. ರಿಫಾ ಇನ್ಸ್ಟಾಗ್ರಾಂ ಪೇಜ್ನಲ್ಲಿ ಬರೋಬ್ಬರಿ 3 ಲಕ್ಷಕ್ಕೂ ಅಧಿಕ ಹಿಂಬಾಲಕರನ್ನು ಹೊಂದಿದ್ದಾರೆ. ಮೂರು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ದಂಪತಿ ಎರಡು ವರ್ಷದ ಓರ್ವ ಗಂಡು ಮಗನಿದ್ದಾನೆ.