ಕಾಸರಗೋಡು: ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ವಿಶ್ವ ರಾಮ ಕ್ಷತ್ರಿಯ ಮಹಾ ಸಂಘದ ಕಾನೂನು ಸಲಹೆಗಾರರಾದ ಯು.ಕರುಣಾಕರ ರಾವ್ ಮತ್ತು ವಿಶ್ವ ರಾಮ ಕ್ಷತ್ರಿಯ ಮಹಾಸಂಘದ ಉಪಾಧ್ಯಕ್ಷ ಟಿ.ನಾಗರಾಜ್ ಕಾಮಧೇನು ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಸಂಸ್ಥೆಯ ಸ್ಥಾಪಕ ಅಧ್ಯಕ್ಷ ವಾಮನ ರಾವ್ ಬೇಕಲ್-ಸಂಧ್ಯಾರಾಣಿ ಟೀಚರ್ ದಂಪತಿಗಳು ಶಾಲು ಹೊದಿಸಿ, ಸ್ಮರಣಿಕೆ, ಗ್ರಂಥ ನೀಡಿ ಗೌರವಿಸಿದರು. ಕಾರ್ಯದರ್ಶಿ ಜಗದೀಶ್ ಕೂಡ್ಲು ಕಾರ್ಯಕ್ರಮ ನಿರ್ವಹಿಸಿದರು. ಕಾಸರಗೋಡು ಜಿಲ್ಲಾ ರಾಮರಾಜ ಕ್ಷತ್ರಿಯ ಯಾನೆ ಕೋಟೆಯರ್ ಸಂಘದ ಗೌರವಾಧ್ಯಕ್ಷ ನಿರಂಜನ್ ಕೊರಕೋಡು, ಕೂಡ್ಲು ಉಪಸಂಘದ ಅಧ್ಯಕ್ಷ ಸತೀಶ್ ಕೂಡ್ಲು, ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ್ ಕಾಸರಗೋಡು ಉಪಸ್ಥಿತರಿದ್ದರು.