ಪಾಲಕ್ಕಾಡ್: ಕೇರಳದ ಪಾಲಕ್ಕಾಡ್‌ನಲ್ಲಿ ತಿಂಗಳ ಹಿಂದೆ ನಡೆದಿದ್ದ ಆರ್‌ಎಸ್‌ಎಸ್ ಮುಖಂಡನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಂಧಿತರೆಲ್ಲರು ಪಿಎಫ್‌ಐನ ರಾಜಕೀಯ ಪಕ್ಷ ಎಸ್‌ಡಿಪಿಐ ಕಾರ್ಯಕರ್ತರು ಎಂದು ಎಡಿಜಿಪಿ(ಕಾನೂನು ಮತ್ತು ಸುವ್ಯವಸ್ಥೆ) ವಿಜಯ್ ಸಖರೆ ತಿಳಿಸಿದ್ದಾರೆ.
ಪಿಎಫ್‌ಐ ಮುಖಂಡ ಸುಬೈರ್ ಕೊಲೆಗೆ ಪ್ರತೀಕಾರವಾಗಿ ಶ್ರೀನಿವಾಸ ಅವರನ್ನು ಹತ್ಯೆ ಮಾಡಲಾಗಿತ್ತು. ಸುಬೈರ್ ಕೊಲೆಗೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಆರ್‌ಎಸ್‌ಎಸ್ ಕಾರ್ಯಕರ್ತರು ಎಂದು ತಿಳಿಸಿದ್ದಾರೆ.