ಕೊಚ್ಚಿ: ನಟಿಯೊಂದಿಗೆ ಪೊಲೀಸ್ ಅಧಿಕಾರಿ ಕೆಟ್ಟದಾಗಿ ನಡೆದುಕೊಂಡಿರುವುದನ್ನು ಕೇರಳ ಪೊಲೀಸರು ಖಚಿತಪಡಿಸಿದ್ದಾರೆ. ಅನುಚಿತವಾಗಿ ವರ್ತಿಸಿದ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಕೊಚ್ಚಿ ನಗರ ಪೊಲೀಸ್ ಆಯುಕ್ತ ಸಿ.ಎಚ್.
ಕೊಚ್ಚಿ: ನಟಿಯೊಂದಿಗೆ ಪೊಲೀಸ್ ಅಧಿಕಾರಿ ಕೆಟ್ಟದಾಗಿ ನಡೆದುಕೊಂಡಿರುವುದನ್ನು ಕೇರಳ ಪೊಲೀಸರು ಖಚಿತಪಡಿಸಿದ್ದಾರೆ. ಅನುಚಿತವಾಗಿ ವರ್ತಿಸಿದ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಕೊಚ್ಚಿ ನಗರ ಪೊಲೀಸ್ ಆಯುಕ್ತ ಸಿ.ಎಚ್.
ಆರೋಪಿ ಪೊಲೀಸ್ ಅಧಿಕಾರಿ ಫೋರ್ಟ್ ಕೊಚ್ಚಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ನಟಿ ಅರ್ಚನಾ, ನಡೆದ ಘಟನೆಯನ್ನು ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡ ಬಳಿಕ ಪ್ರಕರಣ ಬೆಳಕಿಗೆ ಬಂದಿತು. ಆದರೆ, ನಟಿ ಯಾವುದೇ ದೂರು ದಾಖಲಿಸಿರಲಿಲ್ಲ. ಆದರೂ ಪೊಲೀಸರೇ ಸ್ವಯಂ ಪ್ರೇರಿತವಾಗಿ ತನಿಖೆ ನಡೆಸಿದ್ದು, ವರದಿ ಸಲ್ಲಿಸಿದ್ದಾರೆ. ಅಧಿಕಾರಿಯು ನಟಿಯೊಂದಿಗೆ ಕೆಟ್ಟದಾಗಿ ನಡೆದುಕೊಂಡಿರುವುದು ಖಚಿತವಾಗಿದೆ.
ಆದರೆ, ನಟಿ ಮಾಡಿದ್ದ ಆರೋಪವನ್ನು ಪೊಲೀಸ್ ಅಧಿಕಾರಿ ಅಲ್ಲಗೆಳೆದಿದ್ದಾರೆ. ಬದಲಾಗಿ ನಟಿ ಅರ್ಚನಾ ಅವರೇ ಕೆಟ್ಟದಾಗಿ ನಡೆದುಕೊಂಡರು ಎಂದಿದ್ದಾರೆ. ಗಸ್ತು ತಿರುಗುವ ವೇಳೆ ನಾನು ಕೆಲವೊಂದು ಮಾಹಿತಿಯನ್ನಷ್ಟೇ ಕೇಳಿದೆ. ಆದರೆ, ಕೆಟ್ಟದಾಗಿ ನಡೆದುಕೊಳ್ಳಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಅರ್ಚನಾ ಕವಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಪ್ರಕಾರ ಪೊಲೀಸ್ ಅಧಿಕಾರಿ ಅವರನ್ನು ಲೈಂಗಿಕ ಕಾರ್ಯಕರ್ತೆಯರಂತೆ ನಡೆಸಿಕೊಂಡರಂತೆ. ನಾನು ಪ್ರಯಾಣಿಸುತ್ತಿದ್ದ ಆಟೋವನ್ನು ತಡೆದರು. ಎಲ್ಲಿಗೆ ಹೋಗುತ್ತಿದ್ದೀರಾ? ಮತ್ತು ಏಕೆ ಹೋಗುತ್ತಿದ್ದೀರಾ ಎಂದು ಪ್ರಶ್ನೆ ಮಾಡಿದರು. ಇದನ್ನೆಲ್ಲ ಯಾಕೆ ವಿಚಾರಿಸುತ್ತಿದ್ದಾರೆ ಎಂದು ನಾನು ಮತ್ತೆ ಕೇಳಿದಾಗ ಬಹಳ ಕೆಟ್ಟದಾಗಿ ಮಾತನಾಡಿದರು ಎಂದು ಆರೋಪಿಸಿದ್ದಾರೆ. ಇದಷ್ಟೇ ಅಲ್ಲದೆ, ಪೊಲೀಸ್ ಪೇದೆ ಮನೆಗೆ ಹೋಗುವವರೆಗೂ ಹಿಂಬಾಲಿಸಿದರು. ಇದರಿಂದ ಅಸಮಾಧಾನಗೊಂಡಿದ್ದರಿಂದ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದೆ ಎಂದು ನಟಿ ಬಹಿರಂಗಪಡಿಸಿದ್ದಾರೆ.