ಇಂದೋರ್: ಮಧ್ಯಪ್ರದೇಶದಲ್ಲಿ ಆರು ತಿಂಗಳ ಬಳಿಕ ಕೋವಿಡ್‌ನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇಂದೋರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 80 ವರ್ಷದ ಮಹಿಳೆ ಸೋಂಕಿನಿಂದ ಸಾವಿಗೀಡಾಗಿದ್ದಾರೆ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದರು.

ಎರಡೂ ಡೋಸ್ ಲಸಿಕೆ ಪಡೆದಿದ್ದ ಮೃತ ಮಹಿಳೆ ಹಲವು ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆ, ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದರು.
ಆರು ತಿಂಗಳ ಬಳಿಕ ಕೊರೊನಾ ಸೋಂಕಿನಿಂದ ಮಹಿಳೆಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ ಎಂದು ಆರೋಗ್ಯಾಧಿಕಾರಿ ಡಾ.ಬಿ.ಎಸ್.ಸಾಹಿತ್ಯ ತಿಳಿಸಿದರು.
ರಾಜ್ಯದಲ್ಲಿ ಅತಿಹೆಚ್ಚು ಸೋಂಕು ಮತ್ತು ಸಾವಿನ ಪ್ರಕರಣಗಳಿಗೆ ಇಂದೋರ್ ಸಾಕ್ಷಿಯಾಗಿತ್ತು. ಈಗ ತೀವ್ರ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಐದು ಹೊಸ ಪ್ರಕರಣಗಳು ವರದಿಯಾಗಿವೆ. ಇದುವರೆಗೆ 2,07,973 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 1,462 ಸೋಂಕಿತರು ಮೃತಪಟ್ಟಿದ್ದಾರೆ.