HEALTH TIPS

ಜುಲೈನಲ್ಲಿ ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷ ಮುಖಂಡರೊಂದಿಗೆ ಕೆಸಿಆರ್ ಸಭೆ

             ಹೈದ್ರಾಬಾದ್: 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಕೀಯದ ಮೇಲೆ ಕಣ್ಣಿಟ್ಟಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್  ಸಮಾನ ಮನಸ್ಕ ಪಕ್ಷಗಳು ಹಾಗೂ ಮುಖಂಡರನ್ನು ಭೇಟಿ ಮಾಡುತ್ತಿದ್ದಾರೆ. ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಮೇಲೆ ಅವರ ತಕ್ಷಣದ ದೃಷ್ಟಿ ಬಿದಿದ್ದು, ವಿರೋಧ ಪಕ್ಷಗಳೊಂದಿಗೆ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಅವರು ಬಯಸಿದ್ದಾರೆ.

              ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿರುವ ಕೆ. ಚಂದ್ರಶೇಖರ್ ರಾವ್, ರಾಷ್ಟ್ರಪತಿ ಚುನಾವಣೆಗಾಗಿ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ, ಕಾಂಗ್ರೆಸ್‌ಗೆ ಮುಖಂಡರನ್ನು ಭೇಟಿಯಾಗುವ ಪ್ರಯತ್ನ ಮಾಡಿಲ್ಲ. ಬಿಜೆಪಿ ಅಭ್ಯರ್ಥಿಗೆ ಸವಾಲು ಹಾಕಲು ಇತರ ಪಕ್ಷಗಳು ಒಪ್ಪಿದ ಅಭ್ಯರ್ಥಿಯನ್ನು ಬೆಂಬಲಿಸಲು ಕಾಂಗ್ರೆಸ್ ಆಯ್ಕೆ ಮಾಡಬಹುದು ಎಂದು ತೆಲಂಗಾಣ ರಾಷ್ಟ್ರ ಸಮಿತಿಯ ಹಿರಿಯ ನಾಯಕರೊಬ್ಬರು ಹೇಳುತ್ತಾರೆ. 

                 ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮೇ 26 ರಂದು ಕೆಸಿಆರ್ ಭೇಟಿಯಾಗಲಿದ್ದಾರೆ. ಈ ಮಾಸಾಂತ್ಯದಲ್ಲಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಲಿದ್ದು, ಬಿಹಾರಕ್ಕೂ ಭೇಟಿ ನೀಡಲು ಯೋಜಿಸಿದ್ದಾರೆ. ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ. ಕಳೆದ ತಿಂಗಳು ಮುಂಬೈಗೆ ಭೇಟಿ ನೀಡಿದ್ದ ಕೆಸಿಆರ್  ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ , ಎನ್ ಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದರು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೈದ್ರಾಬಾದಿನಲ್ಲಿ ಕೆಸಿಆರ್ ಅವರನ್ನು ಭೇಟಿಯಾಗಿದ್ದರು. 

                ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರನ್ನು ಕೆಸಿಆರ್ ಭೇಟಿಯಾಗುವ ಸೂಚನೆಯಿಲ್ಲ. ಬಿಜೆಪಿ ನೇತೃತ್ವದ ಎನ್‌ಡಿಎ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ವಂತವಾಗಿ ಗೆಲ್ಲಲು 9,194 ಮತಗಳ ಕೊರತೆಯಿದೆ ಎಂದು ಹೇಳಲಾಗಿದೆ. ವೈಎಸ್ಆರ್ ಕಾಂಗ್ರೆಸ್ ಮತ್ತು ಬಿಜು ಜನತಾ ದಳ ಎರಡೂ ಗೆಲುವಿಗೆ ನಿರ್ಣಾಯಕವಾಗಬಹುದು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries