ತಿರುವನಂತಪುರ: ಆಂಧ್ರಪ್ರದೇಶದ ಕರಾವಳಿಯಲ್ಲಿ ಉಂಟಾಗಿರುವ ತೀವ್ರ ಕಡಿಮೆ ಒತ್ತಡದ ಪ್ರದೇಶವು ಪ್ರಬಲವಾದ ವಾಯುಭಾರ ಕುಸಿತಕ್ಕೆ ಕಾರಣವಾಗಿದೆ. ಮುಂದಿನ 12 ಗಂಟೆಗಳಲ್ಲಿ ಕಡಿಮೆ ಒತ್ತಡ ಮತ್ತೆ ದುರ್ಬಲಗೊಳ್ಳಲಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಇರಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭಾರೀ ಮಳೆಯಿಂದಾಗಿ ಇಡುಕ್ಕಿ, ಕೊಟ್ಟಾಯಂ, ಎರ್ನಾಕುಳಂ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತ್ರಿಶೂರ್, ಎರ್ನಾಕುಳಂ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ ಮತ್ತು ಕೊಲ್ಲಂ, ಕಾಸರಗೋಡು ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯಾಗುತ್ತಿದೆ.