ಕೋಝಿಕ್ಕೋಡ್: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಇಂದು ವಯನಾಡ್ ಗೆ ಭೇಟಿ ನೀಡಿದರು. ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಮತ್ತು ರಾಜ್ಯ ವಕ್ತಾರ ಸಂದೀಪ್ ವಾರಿಯರ್ ಸ್ವಾಗತಿಸಿದರು.
ರಾಹುಲ್ ಗಾಂಧಿ ಅವರ ಕ್ಷೇತ್ರವಾದ ವಯನಾಡ್‍ಗೆ ಸ್ಮೃತಿ ಅವರ ಭೇಟಿ ರಾಜಕೀಯ ಮಹತ್ವವನ್ನೂ ಪಡೆದುಕೊಂಡಿದೆ. ಕಳೆದ ಚುನಾವಣೆಯಲ್ಲಿ ಅಮೇಠಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಸೋತಿದ್ದರು.
ಬೆಳಗ್ಗೆ 10 ಗಂಟೆಗೆ ಕಲೆಕ್ಟರೇಟ್ ನಲ್ಲಿ ಆರಂಭವಾದ ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಕೇಂದ್ರ ಸಚಿವರು ಭಾಗವಹಿಸಿದರು. ಮಧ್ಯಾಹ್ನ 1 ಗಂಟೆಗೆ ಸಂಘ ಪರಿವಾರದ ಮುಖಂಡರೊಂದಿಗೆ ಓಶಿನ್ ಹೋಟೆಲ್ ನಲ್ಲಿ ನಡೆದ ಮುಖಂಡರ ಸಭೆಯಲ್ಲಿ ಪಾಲ್ಗೊಂಡರು.
ನಂತರ ಕೇಂದ್ರ ಸಚಿವರು ಕಲ್ಪೆಟ್ಟ ನಗರಸಭೆಯ ಮರವಯಲ್ ಗಿರಿಜನ ಕಾಲೋನಿ, ಒಂದನೇ ವಾರ್ಡ್‍ನ ಪೆÇನ್ನಾಡ ಅಂಗನವಾಡಿ ಮತ್ತು ಸಿಎಸ್‍ಆರ್ ನಿಧಿಯಿಂದ ನಿರ್ಮಿಸಲಾದ ಕನ್ಯಾಂಪಟ್ಟ ಗ್ರಾಮ ಪಂಚಾಯಿತಿಯ ವರದೂರು ಸ್ಮಾರ್ಟ್ ಅಂಗನವಾಡಿಗೆ ಭೇಟಿ ನೀಡಿದರು. ಸಂಜೆ 4 ಗಂಟೆಗೆ ಮಾಧ್ಯಮಗೋಷ್ಠಿ ನಡೆಸಿದರು.