ಬದಿಯಡ್ಕ: ಕುಕ್ಕಂಕೂಡ್ಲು ಶ್ರೀಕಂಠಪ್ಪಾಡಿ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೇ. 17 ರಂದು ಮಂಗಳವಾರ ಸಂಜೆ 7-30ಕ್ಕೆ ವರ್ಷಂಪ್ರತಿ ನಡೆದು ಬರುತ್ತಿರುವ ವಸಂತ ಪೂಜೆ ನಡೆಯಲಿದೆ. ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ವಸಂತ ಪೂಜಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಭಗವ್ಭಕ್ತರು ಆಗಮಿಸಿ ಪೂಜೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಸಮಿತಿ ವಿನಂತಿಸಿದೆ.