ಕೊಚ್ಚಿ: ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಕಠಿಣ ಸಂದೇಶ ನೀಡಲಾಗಿದೆ. ಭಾರೀ ಮಳೆಯಿಂದಾಗಿ ಇಡುಕ್ಕಿ ಮತ್ತು ಎರ್ನಾಕುಳಂನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅತಿವೃಷ್ಟಿಯಿಂದ ಎರಡು ಕಡೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ದಿನದ 24 ಗಂಟೆಯೂ ನಿಯಂತ್ರಣ ಕೊಠಡಿ ತೆರೆದಿರುತ್ತದೆ ಎಂದು ಮುಖ್ಯ ಕಾರ್ಯದರ್ಶಿ ತಿಳಿಸಿರುವರು. ತುರ್ತು ಸಂದರ್ಭ ಸಹಾಯಗಳಿಗೆ 1077 ಸಂಖ್ಯೆಗೆ ಸಂಪರ್ಕಿಸಲು ಸೂಚಿಸಲಾಗಿದೆ.
ಕೇರಳ ಪೊಲೀಸರು ಸಿದ್ಧತೆಗಳೊಂದಿಗೆ ಪಡೆಗಳನ್ನು ನಿಯೋಜಿಸಲು ಪ್ರಾರಂಭಿಸಿದ್ದಾರೆ ಎಂದು ಡಿಜಿಪಿ ಹೇಳಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲಿ ಎಚ್ಚರಿಕೆ ನೀಡಲಾಗಿದೆ. ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರ, ಪತ್ತನಂತಿಟ್ಟ, ಕೊಲ್ಲಂ, ಕೊಟ್ಟಾಯಂ, ಆಲಪ್ಪುಳ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.