ಅಗರ್ತಲ: ತ್ರಿಪುರಾ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿರುವಂತೆಯೇ ಬಿಪ್ಲಬ್ ಕುಮಾರ್ ದೇಬ್ ಮುಖ್ಯಮಂತ್ರಿ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.
ರಾಜಭವನದಲ್ಲಿ ರಾಜ್ಯಪಾಲ ಎಸ್ ಎನ್ ಅರ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಬಿಪ್ಲಬ್ ಕುಮಾರ್ ದೇಬ್ ಈ ವಿಷಯ ತಿಳಿಸಿದರು.
ನಿನ್ನೆ ನವದೆಹಲಿಗೆ ತೆರಳಿದ್ದ ಬಿಪ್ಲಬ್ ಕುಮಾರ್ ದೇಬ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಈ ಭೇಟಿ ಬೆನ್ನಲ್ಲೇ ಇಂದು ರಾಜೀನಾಮೆ ಸಲ್ಲಿಸಿದ್ದು, ಬಿಜೆಪಿಯ ರಾಜ್ಯ ಘಟಕದಲ್ಲಿ ಒಳಜಗಳ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಡಾ. ಮಾಣಿಕ್ ಸಹಾ ನೂತನ ತ್ರಿಪುರಾ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ತ್ರಿಪುರಾದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.