ಧರ್ಮಶಾಲ: 'ಹಿಮಾಚಲ ಪ್ರದೇಶದಲ್ಲಿ ಶೀಘ್ರದಲ್ಲೇ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲಾಗುವುದು. ಅದರಿಂದ ಮುಸ್ಲಿಮರಿಗೆ ತೊಂದರೆಯಾಗದು' ಎಂದು ಅಲ್ಲಿನ ಮುಖ್ಯಮಂತ್ರಿ ಜೈರಾಂ ಠಾಕೂರ್ ಹೇಳಿದ್ದಾರೆ.
ಶೀಘ್ರದಲ್ಲೇ ಏಕರೂಪ ನಾಗರಿಕ ಸಂಹಿತೆ ಜಾರಿ: ಹಿಮಾಚಲ ಪ್ರದೇಶ ಸಿಎಂ
0
ಮೇ 02, 2022
Tags
ಧರ್ಮಶಾಲ: 'ಹಿಮಾಚಲ ಪ್ರದೇಶದಲ್ಲಿ ಶೀಘ್ರದಲ್ಲೇ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲಾಗುವುದು. ಅದರಿಂದ ಮುಸ್ಲಿಮರಿಗೆ ತೊಂದರೆಯಾಗದು' ಎಂದು ಅಲ್ಲಿನ ಮುಖ್ಯಮಂತ್ರಿ ಜೈರಾಂ ಠಾಕೂರ್ ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆಯನ್ನು ರಾಜ್ಯದಲ್ಲಿ ಶೀಘ್ರದಲ್ಲೇ ಜಾರಿಗೊಳಿಸಲಿದ್ದೇವೆ. ಇದರಿಂದ ಮುಸ್ಲಿಮರಿಗೆ ಯಾವುದೇ ಸಮಸ್ಯೆಯಾಗದು ಎಂದು ಹೇಳಿರುವುದಾಗಿ 'ಎಎನ್‌ಐ' ಸುದ್ದಿಸಂಸ್ಥೆ ವರದಿ ಮಾಡಿದೆ.
'ಹಿಮಾಚಲ ಪ್ರದೇಶವು ಇತರ ರಾಜ್ಯಗಳಿಗಿಂತ ಭಿನ್ನವಾಗಿದೆ. ಮುಸ್ಲಿಂ ಮಹಿಳೆಯರೂ ಸೇರಿದಂತೆ ಪ್ರತಿಯೊಬ್ಬರೂ ಏಕರೂಪ ನಾಗರಿಕ ಸಂಹಿತೆಯನ್ನು ಸ್ವಾಗತಿಸಲಿದ್ದಾರೆ ಎಂದು ಭಾವಿಸುತ್ತೇನೆ. ಇದರಿಂದ ಅವರಿಗೆ ಪ್ರಯೋಜನವಾಗಲಿದೆಯಲ್ಲದೆ, ಅವರು ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗಲಿದೆ' ಎಂದು ಮುಖ್ಯಮಂತ್ರಿ ಹೇಳಿದ್ದಾರೆ.