HEALTH TIPS

ಕಾಬುಲ್ ಮಹಿಳೆಯರಿಗೆ ಚಾಲನಾ ಪರವಾನಗಿ ರದ್ದು ಮಾಡಿದ ತಾಲಿಬಾನ್​: ವರದಿ

           ಕಾಬೂಲ್: ಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದಿರುವ ತಾಲಿಬಾನ್ ಸರ್ಕಾರ, ಕಾಬೂಲ್ ಮತ್ತು ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ಚಾಲನಾ ಪರವಾನಗಿ ನೀಡುವುದನ್ನು ನಿಷೇಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

           ಈ ಹಿಂದೆ ತಾಲಿಬಾನ್ ಸರ್ಕಾರ ಮಹಿಳೆಯರ ಶಿಕ್ಷಣವನ್ನು 6ನೇ ತರಗತಿವರೆಗೆ ನಿರ್ಬಂಧಿಸಿ ಆದೇಶ ಹೊರಡಿಸಿತ್ತು. ಇದೀಗ ಮಹಿಳೆಯರಿಗೆ ನೀಡಲಾಗುವ ಚಾಲನಾ ಪರವಾನಗಿ ನೀಡುವುದನ್ನು ನಿಲ್ಲಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

            ತಾಲಿಬಾನ್​ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮುಂದುವರಿದಿದೆ. ಅದರಲ್ಲೂ ಮಹಿಳೆಯರ ವಿರುದ್ಧ ಉಗ್ರವಾದಿ ಸರ್ಕಾರ ಇನ್ನಿಲ್ಲದ ನಿಯಮಗಳನ್ನು ಜಾರಿ ಮಾಡುತ್ತಲೇ ಇದೆ.

            ಮಹಿಳೆಯರಿಗೆ ಆರನೇ ತರಗತಿಗಿಂತ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹೋಗುವುದನ್ನು ನಿಷೇಧಿಸಿತ್ತು. ಇದು ವಿಶ್ವಾದ್ಯಂತ ಖಂಡನೆಗೆ ಕಾರಣವಾಗಿತ್ತು. ಶಿಕ್ಷಕರ ಕೊರತೆಯ ಕಾರಣ ಈ ರೀತಿ ಮಾಡಲಾಗಿದೆ. ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಬಯಸುವ ಹೆಣ್ಣುಮಕ್ಕಳಿಗೆ ಅವಕಾಶ ನೀಡಲಾಗುವುದು ಎಂದು ಸರ್ಕಾರ ತಿಳಿಸಿತ್ತು.

            ಅಫ್ಘಾನಿಸ್ತಾನ ಗಂಭೀರವಾದ ಮಾನವೀಯ ಬಿಕ್ಕಟ್ಟು ಎದುರಿಸುತ್ತಿದೆ. ದೇಶ ವಿಶ್ವದಲ್ಲೇ ಅತಿ ಹೆಚ್ಚು ತುರ್ತು ಆಹಾರ ಅಭದ್ರತೆಯನ್ನು ಹೊಂದಿದೆ. ಶೇ.95 ಜನಸಂಖ್ಯೆಯು ಆಹಾರ ಕೊರತೆಯಿಂದ ಬಳಲುತ್ತಿದೆ ಎಂದು ಅಂದಾಜಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries