ನವದೆಹಲಿ: ಕೋವಿಡ್ ಸಾವಿನ ಕುರಿತು ವಿಶ್ವ ಆರೋಗ್ಯ ಸಂಖ್ಯೆ (ಡಬ್ಲ್ಯುಎಚ್‌ಒ) ಅಂಕಿಅಂಶಗಳನ್ನು ಬಿಡುಗಡೆ ಮಾಡಿದ ಒಂದು ದಿನದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನವದೆಹಲಿ: ಕೋವಿಡ್ ಸಾವಿನ ಕುರಿತು ವಿಶ್ವ ಆರೋಗ್ಯ ಸಂಖ್ಯೆ (ಡಬ್ಲ್ಯುಎಚ್‌ಒ) ಅಂಕಿಅಂಶಗಳನ್ನು ಬಿಡುಗಡೆ ಮಾಡಿದ ಒಂದು ದಿನದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ವಿಚಾರವಾಗಿ ಶುಕ್ರವಾರ ಟ್ವೀಟ್ ಮಾಡಿರುವ ಅವರು, 'ಕೋವಿಡ್ ಸಾಂಕ್ರಾಮಿಕದಿಂದ 47 ಲಕ್ಷ ಭಾರತೀಯರು ಮೃತಪಟ್ಟಿದ್ದಾರೆ.
ಭಾರತದಲ್ಲಿ ಕೋವಿಡ್‌ನಿಂದಾಗಿ 47 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್‌ಒ) ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದು, ಸರ್ಕಾರ ಅಧಿಕೃತವಾಗಿ ಘೋಷಿಸಿದ್ದಕ್ಕಿಂತಲೂ ಬಹುತೇಕ 10 ಪಟ್ಟು ಹೆಚ್ಚಾಗಿದೆ.
ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ಜನವರಿ 2020ರಿಂದ ಡಿಸೆಂಬರ್ 2021ರವರೆಗೂ ಭಾರತದಾದ್ಯಂತ ಕೋವಿಡ್ ಕಾರಣಗಳಿಂದ ಸಾವಿಗೀಡಾದವರ ಸಂಖ್ಯೆ 47,40,894 ಮುಟ್ಟಿತ್ತು.
ಆರೋಗ್ಯ ಇಲಾಖೆಯ ದಾಖಲೆಯ ಪ್ರಕಾರ, 2021ರ ಅಂತ್ಯಕ್ಕೆ ದೇಶದಲ್ಲಿ ಮೃತಪಟ್ಟವರ ಸಂಖ್ಯೆ ಸುಮಾರು 4,81,000. ಪ್ರಸ್ತುತ ದೇಶದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,23,000 ದಾಟಿದೆ.