ತಿರುವನಂತಪುರ: ರಾಜ್ಯದ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಿಂಪಡೆಯಲಾಗಿದೆ. ಇದೇ ವೇಳೆ ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಂದು ಬೆಳಗ್ಗೆಯಿಂದ ಕೇರಳದಲ್ಲಿ ಮೋಡ ಕವಿದ ವಾತಾವರಣವಿರಲಿಲ್ಲ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಹಿಂಪಡೆದಿದೆ. ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪಾಲಕ್ಕಾಡ್ ಮತ್ತು ವಯನಾಡ್ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆದರೆ ಬೆಳಿಗ್ಗೆ ಎಲ್ಲೂ ತುಂತುರು ಮಳೆ ಇದ್ದಿರಲಿಲ್ಲ. ಈ ನಡುವೆ ಮಂಗಳವಾರ ಎಲ್ಲ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಮಾನ್ಸೂನ್‌ಗೆ ಮುಂಚಿತವಾಗಿ ಅರಬ್ಬಿ ಸಮುದ್ರದಲ್ಲಿ ಪಶ್ಚಿಮ ಮಾರುತಗಳು ಪ್ರಬಲವಾಗಿವೆ. ದಕ್ಷಿಣ ಕರ್ನಾಟಕದ ಮೇಲೂ ಚಂಡಮಾರುತ ಪ್ರಭಾವ ಬೀರಿದೆ. ಹಾಗಾಗಿ ಕೇರಳದಲ್ಲಿ ಅನಿರೀಕ್ಷಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.