ತಿರುವನಂತಪುರಂ: ಅಸಾನಿ ಚಂಡಮಾರುತದ ಹಿನ್ನೆಲೆಯಲ್ಲಿ ಇಂದು ಮತ್ತು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಇಂದು ಕೆಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಲಪ್ಪುಳ, ಇಡುಕ್ಕಿ, ಕೊಟ್ಟಾಯಂ ಮತ್ತು ಎರ್ನಾಕುಳಂ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಗಳಲ್ಲಿ 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆ ಜತೆಗೆ ಜೋರು ಗಾಳಿ ಬೀಸುವ ಸಾಧ್ಯತೆ ಇದೆ. ಜನರು ಜಾಗರೂಕರಾಗಿರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ