ತಿರುವನಂತಪುರಂ: ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇದರ ಆಧಾರದ ಮೇಲೆ ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕರ್ನಾಟಕದಲ್ಲಿ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ.
ಹವಾಮಾನ ಇಲಾಖೆ ಪ್ರಕಾರ ಇಂದು ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುವ ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಆಲಪ್ಪುಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾÀಗಿದೆ.
ಕಳೆದ ಕೆಲವು ದಿನಗಳಿಂದ ಮಧ್ಯ ಕೇರಳದಲ್ಲಿ ಭಾರೀ ಮಳೆಯಾಗಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಜನರು ಜಾಗರೂಕರಾಗಿರಬೇಕು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಸ್‍ಡಿಎಂಎ) ಎಚ್ಚರಿಸಿದೆ. ಯಾವುದೇ ಪರಿಸ್ಥಿತಿ ಎದುರಿಸಲು ಸಜ್ಜಾಗಿರುವಂತೆ ಪೆÇಲೀಸರಿಗೆ ಸೂಚನೆ ನೀಡಲಾಗಿದೆ.
ಭಾರೀ ಗಾಳಿ ಮತ್ತು ಮಳೆಯಾಗುವ ಸಾಧ್ಯತೆಯಿರುವುದರಿಂದ ಮೀನುಗಾರಿಕೆಯನ್ನು ಸಹ ನಿಷೇಧಿಸಲಾಗಿದೆ. ಮುಂದಿನ ಸೂಚನೆ ಬರುವವರೆಗೂ ಮೀನುಗಾರರು ಕೇರಳ ಕರಾವಳಿಗೆ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ.
ಆರೆಂಜ್ ಅಲರ್ಟ್ ಹೊಂದಿರುವ ಜಿಲ್ಲೆಗಳು
17/05/2022: ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು
18/05/2022: ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು.
ಯೆಲ್ಲೋ ಅಲರ್ಟ್ ಹೇರಲಾಗಿರುವ ಜಿಲ್ಲೆಗಳು
17/05/2022: ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಕೊಟ್ಟಾಯಂ, ಅಲಪ್ಪುಳ, ತ್ರಿಶೂರ್, ಎರ್ನಾಕುಲಂ, ಇಡುಕ್ಕಿ, ಪಾಲಕ್ಕಾಡ್ ಮತ್ತು ವಯನಾಡ್.
18/05/2022: ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ
19/05/2022: ತಿರುವನಂತಪುರಂ, ಕೊಲ್ಲಂ, ಪಾಲಕ್ಕಾಡ್, ಮಲಪ್ಪುರಂ, ಕೋಝಿಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು
20/05/2022: ತಿರುವನಂತಪುರಂ, ಕೊಲ್ಲಂ