ನವದೆಹಲಿ: 2025ರ ವೇಳೆಗೆ ಕ್ಷಯರೋಗವನ್ನು (ಟಿ.ಬಿ) ನಿರ್ಮೂಲನೆ ಮಾಡುವ ಗುರಿ ಸಾಧಿಸಲು, ಜನರು ಮತ್ತು ಸಂಘ- ಸಂಸ್ಥೆಗಳು ಕ್ಷಯರೋಗಿಗಳನ್ನು ದತ್ತು ತೆಗೆದುಕೊಳ್ಳುವ ಹೊಸ ಯೋಜನೆಯನ್ನು ಕೇಂದ್ರ ಸರ್ಕಾರವು ಶೀಘ್ರದಲ್ಲೇ ಜಾರಿಗೆ ತರಲಿದೆ.
ನವದೆಹಲಿ: 2025ರ ವೇಳೆಗೆ ಕ್ಷಯರೋಗವನ್ನು (ಟಿ.ಬಿ) ನಿರ್ಮೂಲನೆ ಮಾಡುವ ಗುರಿ ಸಾಧಿಸಲು, ಜನರು ಮತ್ತು ಸಂಘ- ಸಂಸ್ಥೆಗಳು ಕ್ಷಯರೋಗಿಗಳನ್ನು ದತ್ತು ತೆಗೆದುಕೊಳ್ಳುವ ಹೊಸ ಯೋಜನೆಯನ್ನು ಕೇಂದ್ರ ಸರ್ಕಾರವು ಶೀಘ್ರದಲ್ಲೇ ಜಾರಿಗೆ ತರಲಿದೆ.
ಜೂನ್ ವೇಳೆಗೆ ಔಪಚಾರಿಕವಾಗಿ ಕ್ಷಯರೋಗಿಗಳ ದತ್ತುಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಚುನಾಯಿತ ಜನ ಪ್ರತಿನಿಧಿಗಳು, ಸರ್ಕಾರೇತರ ಸಂಸ್ಥೆಗಳು, ವ್ಯಕ್ತಿಗಳು, ಸಂಸ್ಥೆಗಳು (ಸಾರ್ವಜನಿಕ ಮತ್ತು ಖಾಸಗಿ ಎರಡೂ) ಮತ್ತು ಕ್ಷಯರೋಗಿಗಳನ್ನು ಅಥವಾ ರೋಗಿಗಳಿರುವ ಬ್ಲಾಕ್‌ಗಳು, ನಗರ ವಾರ್ಡ್‌ಗಳು ಅಥವಾ ಜಿಲ್ಲೆಗಳನ್ನು ದತ್ತು ತೆಗೆದುಕೊಳ್ಳಬಹುದು. ದತ್ತು ಪಡೆದವರು ಈ ರೋಗಿಗಳಿಗೆ ಪೌಷ್ಟಿಕಾಂಶ ಇರುವ ಆಹಾರ ಮತ್ತು ಚಿಕಿತ್ಸೆ ಒದಗಿಸುವ ಕಾರ್ಯಕ್ರಮವನ್ನು ಈ ಯೋಜನೆಯು ಒಳಗೊಂಡಿದೆ.
ಈ ಸಂಬಂಧ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯವು, ಎಲ್ಲಾ ಜಿಲ್ಲೆಗಳು ಮತ್ತು ಬ್ಲಾಕ್‌ಗಳಲ್ಲಿ 'ಕ್ಷಯ ರೋಗಿಗಳಿಗೆ ಸಮುದಾಯ ಬೆಂಬಲ' ನೀಡುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.