ನವದೆಹಲಿ: ನವದೆಹಲಿಯ ನೂತನ ಸಂಸತ್ ಭವನ ಕಟ್ಟಡದಲ್ಲಿ ಅಲ್ಪ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅಗ್ನಿ ಶಾಮಕ ದಳದ ಅಧಿಕಾರಿಗಳು, 'ನೂತನ ಸಂಸತ್ ಕಟ್ಟಡದಲ್ಲಿ ಮಧ್ಯಾಹ್ನ ಸುಮಾರು 12.35ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕೆ ಐದು ಅಗ್ನಿ ಶಾಮಕ ವಾಹನಗಳು ಧಾವಿಸಿವೆ. ಇದು ಅಲ್ಪ ಪ್ರಮಾಣದ ಬೆಂಕಿಯಾಗಿದ್ದು, ಯಾವುದೇ ಹೆಚ್ಚಿನ ಹಾನಿ ಆಗಿಲ್ಲ' ಎಂದು ತಿಳಿಸಿದ್ದಾರೆ.