ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಇಂದು ನಡೆದ ಎನ್ ಕೌಂಟರ್ ನಲ್ಲಿ ಲಷ್ಕರ್ -ಎ- ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಹತ್ಯೆಗೀಡಾದ ಉಗ್ರರಿಂದ ಶಸಾಸ್ತ್ರಗಳು, ಮದ್ದು ಗುಂಡುಗಳು ಮತ್ತು ಕೆಲವು ಅನುಮಾನಾಸ್ಪದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಚೆಯನ್ ದೇವ್ಸರ್ ನಲ್ಲಿ ಉಗ್ರರು ಅಡಗಿರುವ ಬಗ್ಗೆ ಸುಳಿವು ಪಡೆದ ನಂತರ ಸೇನೆ ಮತ್ತು ಪೊಲೀಸರು ಜಂಟಿಯಾಗಿ ಆ ಪ್ರದೇಶದಲ್ಲಿ ಶೋಧ ಕಾರ್ಯಚಾರಣೆ ನಡೆಸಿದ್ದಾಗಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಹೇಳಿದ್ದಾರೆ.
ಭದ್ರತಾ ಪಡೆಗಳ ಜಂಟಿ ತಂಡವು ಅಡಗಿ ಕುಳಿತಿದ್ದ ಭಯೋತ್ಪಾದಕರ ಕಡೆಗೆ ಸಾಗುತ್ತಿದ್ದಾಗ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಆರಂಭಿಸಿದರು. ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿ, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.