ಬದಿಯಡ್ಕ: ನೆಕ್ರಾಜೆ ಗ್ರಾಮದ ಸಂತಾನ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಬಿಂಬ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಶನಿವಾರ ವಿದ್ಯುಕ್ತವಾಗಿ ಆರಂಭಗೊಂಡಿದ್ದು, 15ರ ವರೆಗೆ ನಡೆಯಲಿದೆ.
ದೇಗುಲದ ಶಿಲಾಮಯ ಗರ್ಭಗುಡಿ, ನಮಸ್ಕಾರ ಮಂಟಪ, ವನಶಾಸ್ತಾರ ಗುಡಿ ಸೇರಿದಂತೆ ಹಲವು ಕಾಮಗಾರಿಗಳನ್ನೊಳಗೊಂಡಂತೆ ಸುಮಾರು 3ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಕಾರ್ಯ ನಡೆಸಲಾಗಿದೆ. ಕ್ಷೇತ್ರ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿ ಅವರ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವ ಆರಂಭಗೊಂಡಿದೆ.
ಶನಿವಾರ ಬೆಳಗ್ಗೆ 10ಕ್ಕೆ ಹಸಿರುವಾಣಿ ಸಮರ್ಪಣಾ ಮೆರವಣಿಗೆ ನಡೆಯಿತು. ಸಂಜೆ 6 ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹ ವಾಚನ, ಬಿಂಬಪರಿಗ್ರಹ ನೇತ್ರೋನ್ಮಿಲನ, ಪ್ರಾಸಾದ ಶುದ್ದಿ, ಅಂಕುರಾರೋಹಣ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ ನಡೆಯಲಿದೆ. ಬೆಳಿಗ್ಗೆ 8 ರಿಂದ ವಿವಿ|ಧ ಭಜನಾ ತಂಡಗಳಿಂದ ಭಜನೆ, 11 ಕ್ಕೆ ಉಗ್ರಾಣ ಮುಹೂರ್ತ, ಮಧ್ಯಾಹ್ನ ಅನ್ನದಾನ, ಸಂಜೆ 5ಕ್ಕೆ ತಂತ್ರಿವರ್ಯರ ಆಗಮನ, ಸಂಜೆ 5.30 ಕ್ಕೆ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳು ಹಾಗೂ ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿಗಳ ಆಗಮನ, ಧಾರ್ಮಿಕ ಸಭೆ ನಡೆಯಿತು. ಬಳಿಕ ಯಕ್ಷಗಾನ ಬಯಲಾಟ ನಡೆಯಿತು.
ಇಂದಿನ ಕಾರ್ಯಕ್ರಮ(8/05)
ಭಾನುವಾರ ಬೆಳಿಗ್ಗೆ 5 ರಿಂದ ಗಣಪತಿಹೋಮ, ಪ್ರಾಯಶ್ಚಿತಹೋಮಗಳು, ಚತುಃಶುದ್ದಿ ಧಾರಾ ಮೊದಲಾದ ವಿಧಿವಿಧಾನಗಳು ನಡೆಯಲಿವೆ. ಧಾರ್ಮಿಕ ಕಾರ್ಯಕ್ರಮದ ಭಾಗವಾಗಿ ಬೆಳಿಗ್ಗೆ 7.30 ರಿಂದ ವಿವಿ|ಧ ಭಜನಾ ತಂಡಗಳಿಂದ ಭಜನೆ, 10 ಕ್ಕೆ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ವಿದ್ಯಾಪ್ರಸನ್ನ ತೀರ್ಥ ಪಾದಂಗಳ ಆಗಮನ, 10.30 ಕ್ಕೆ ಧಾರ್ಮಿಕ ಸಭೆ ನಡೆಯಲಿದೆ. ವಸಂತ ಪೈ ಬದಿಯಡ್ಕ ಅ|ಧ್ಯಕ್ಷತೆ ವಹಿಸುವರು. ವಿವಿಧ ಗಣ್ಯರು ಉಪಸ್ಥಿತರಿರುವರು. ಡಾ.ರವೀಶ ಪಡುಮಲೆ ಧಾರ್ಮಿಕ ಉಪನ್ಯಾಸ ನೀಡುವರು. ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 2 ರಿಂದ ಕಲಾರತ್ನ ಶಂ.ನಾ.ಅಡಿಗ ಕುಂಬಳೆ ಅವರ ಶಿಷ್ಯಂದಿರಾದ ಪೂಜಾ ವಾಸುದೇವ ಐಲ ಹಾಗೂ ಅ|ಭಿಜ್ಞಾ ಬೊಳುಂಬು ಅವರಿಂದ ಹರಿಕಥಾ ಸತ್ಸಂಗ, ಸಂಜೆ 7 ರಿಂದ ವಿದುಷಿಃ ವಿದ್ಯಾಲಕ್ಷ್ಮೀ ಕುಂಬಳೆ ಇವರ ಶಿಷ್ಯವೃಂದದವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ.