ತಿರುವನಂತಪುರ: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ವೈರಲ್ ಜ್ವರ ಮತ್ತು ತೀವ್ರ ಭೇದಿ ಹರಡುವ ಸಾಧ್ಯತೆ ಹೆಚ್ಚು. ಮುಂಗಾರು ಪೂರ್ವ ಸ್ವಚ್ಛತೆ ಹಾಗೂ ಸೊಳ್ಳೆ ನಿಯಂತ್ರಣ ಮಾಡದಿರುವುದು ಹಿನ್ನಡೆಯಾಗಿದೆ ಎಂಬುದು ಆರೋಗ್ಯ ಇಲಾಖೆ ಮಾಹಿತಿ.
ರಾಜ್ಯದಲ್ಲಿ ಈ ತಿಂಗಳವರೆಗೆ 113 ಮಂದಿಗೆ ಡೆಂಗ್ಯೂ ಪತ್ತೆಯಾಗಿದೆ. 77 ಮಂದಿ ಲೆಪೆÇ್ಟಸ್ಪೈರೋಸಿಸ್‍ನಿಂದ ಬಳಲುತ್ತಿದ್ದಾರೆ. 72621 ಜನರು ಸಾಂಕ್ರಾಮಿಕ ರೋಗದಿಂದ ಬಳಲುತ್ತಿದ್ದಾರೆ. 26,282 ಮಂದಿ ಜನರು ತೀವ್ರ ಅತಿಸಾರದಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಸಂಭವವಿದ್ದು, ಎಚ್ಚೆತ್ತುಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.
ಮುಂಗಾರು ಪೂರ್ವ ಸ್ವಚ್ಛತೆ ಹಾಗೂ ಸೊಳ್ಳೆ ನಿರ್ಮೂಲನೆ ಮಾಡದಿರುವುದು ಸಾರ್ವಜನಿಕರ ಆರೋಗ್ಯಕ್ಕೆ ಧಕ್ಕೆ ತಂದಿದೆ. ಮುಂಗಾರು ಪೂರ್ವದಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಸಾಧ್ಯವಾಗಿಲ್ಲ ಎನ್ನುತ್ತಾರೆ ಅಧಿಕಾರಿಗಳು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೊಳ್ಳೆ ನಿರ್ಮೂಲನೆ ಕೈಗೊಳ್ಳುವಂತೆ ಆಯಾ ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಸೂಚಿಸಿದೆ.
ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದರೆ, ಈ ಬಾರಿ ವೈರಲ್ ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ. ಆದ್ದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಅಗತ್ಯ ಔಷಧಗಳನ್ನು ಖರೀದಿಸುವಂತೆ ಸೂಚಿಸಲಾಗಿದೆ. ಮುಂದಿನ ನಾಲ್ಕು ತಿಂಗಳ ಕಾಲ ಸಾಂಕ್ರಾಮಿಕ ರೋಗಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಲಾಗುವುದು ಎಂದು ಆರೋಗ್ಯ ಇಲಾಖೆ ಹೇಳಿದೆ.