ನವದೆಹಲಿ: ಗ್ಯಾನವಾಪಿ ಸಮೀಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಾರಣಾಸಿ ಮ್ಯಾಜಿಸ್ಟ್ರೇಟ್ ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು, ಮಸೀದಿಯ ಆವರಣದಲ್ಲಿ ಸಮೀಕ್ಷೆಯ ವೇಳೆ ಪತ್ತೆಯಾಗಿರುವ ಶಿವಲಿಂಗವನ್ನು ರಕ್ಷಿಸಬೇಕು ಎಂದು ಹೇಳಿದೆ.
ಗ್ಯಾನವಾಪಿ ಮಸೀದಿಯಲ್ಲಿ ಮುಸ್ಲಿಮರು ನಮಾಜ್ ಸಲ್ಲಿಸಬಹುದು ಎಂದು ಕೋರ್ಟ್ ಹೇಳಿದ್ದು, ಸಿವಿಲ್ ನ್ಯಾಯಾಧೀಶರ ಹಂತದಲ್ಲಿರುವ ಉಳಿದ ಪ್ರಕ್ರಿಯೆಗಳಿಗೆ ತಡೆ ನೀಡುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ವಾರಣಾಸಿಯ ಸಿವಿಲ್ ನ್ಯಾಯಾಧೀಶರು ಗ್ಯಾನವಾಮಿ ಮಸೀದಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.
ವಿಡಿಯೋಗ್ರಫಿ ನಡೆಸಲು ಕೋರಿ ಅರ್ಜಿ ಸಲ್ಲಿಸಿದ್ದ ಹಿಂದೂ ಭಕ್ತಾದಿಗಳಿಗೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿಗೊಳಿಸಿದ್ದು, ಮಸೀದಿ ಸಮಿತಿಯ ಅರ್ಜಿಯ ವಿಚಾರಣೆಯನ್ನು ಮೇ.19 ಕ್ಕೆ ಮುಂದೂಡಿದೆ.