HEALTH TIPS

ಮಕ್ಕಳಲ್ಲಿ 'ಟೊಮೆಟೊ ಫ್ಲೂ' ರೋಗ: ಕೇರಳ ಗಡಿಯಲ್ಲಿ ಕಟ್ಟೆಚ್ಚರ

               ಬೆಂಗಳೂರು: 'ಮಕ್ಕಳಲ್ಲಿ ಕಂಡು ಬರುವ ಟೊಮೆಟೊ ಫ್ಲೂ ರೋಗದ ಹರಡುವಿಕೆ ತಡೆಗಟ್ಟಲು ಕೇರಳ ಗಡಿಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದು ಈಗಾಗಲೇ ಇರುವ ಕಾಯಿಲೆಯಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ' ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

              'ಕೇರಳದಲ್ಲಿ ಈ ರೋಗದ ಪ್ರಕರಣ ಗಳು ಪತ್ತೆಯಾಗಿರುವುದರಿಂದ ಮಂಗ‌ಳೂರು, ಉಡುಪಿ, ಕೊಡಗು, ಚಾಮ ರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಕೇರಳದಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ಇರಿಸಲು ಸೂಚನೆ ನೀಡಲಾಗಿದೆ' ಎಂದರು.

            'ರಾಜ್ಯದ ಯಾವುದೇ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ ಈ ರೋಗ ಲಕ್ಷಣ ಕಂಡು ಬರುವ ಮಕ್ಕಳ ಬಗ್ಗೆ ಕೂಡಲೇ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ. ಈ ಬಗ್ಗೆ ಹೆಚ್ಚಿನ ನಿಗಾ ಇರಿಸಲು ಎಲ್ಲಾ ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿಯಿಂದ ಲಿಖಿತ ನಿರ್ದೇಶನ ನೀಡಲಾಗಿದೆ. ಅಪರೂಪದ ವೈರಸ್ ಆಗಿರುವ ಟೊಮೆಟೊ ಜ್ವರದ ಪ್ರಕರಣಗಳು ಕೇರಳ ರಾಜ್ಯದ ಅರ್ಯಂಕಾರು, ಅಂಚಲ್ ಹಾಗೂ ನೆಡುವತೂರ್‌ನಲ್ಲಿ ಕಂಡು ಬಂದಿವೆ. ಟೊಮೆಟೊ ಜ್ವರಕ್ಕೂ ಕೊರೊನಾಗೂ ಯಾವುದೇ ರೀತಿಯ ಸಂಬಂಧವಿಲ್ಲ. ಇದು ಕೇರಳದಲ್ಲಿ ಈಗಾಗಲೇ ಇರುವ ಕಾಯಿಲೆಯಾಗಿದೆ' ಎಂದು ತಿಳಿಸಿದ್ದಾರೆ.

                               ರೋಗ ಲಕ್ಷಣ:
* ಸಾಮಾನ್ಯವಾಗಿ 5 ವರ್ಷ ವಯಸ್ಸಿನ ಒಳಗಿನ ಮಕ್ಕಳಲ್ಲಿ ಕಂಡು ಬರುತ್ತದೆ.
* ಚರ್ಮದ ತುರಿಕೆ, ಕೆಂಪಾಗುವುದು, ನೀರಡಿಕೆ ಮೊದಲಾದ ಲಕ್ಷಣಗಳನ್ನು ಹೊಂದಿವೆ.
* ತೀವ್ರ ಜ್ವರ, ಮೈ ಕೈ ನೋವು, ಕೀಲು ನೋವು, ಆಯಾಸ ಮೊದಲಾದ ಲಕ್ಷಣಗಳೂ ಕಂಡುಬರುತ್ತವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries