ತಿರುವನಂತಪುರ: ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಸತತ ಮಳೆಯಿಂದಾಗಿ ಹಲವು ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಎರ್ನಾಕುಳಂ, ತ್ರಿಶೂರ್ ಮತ್ತು ಇಡುಕ್ಕಿಯಲ್ಲಿ ಭಾರೀ
ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಖೆ ತಿಳಿಸಿದೆ.
ಮಳೆಯಿಂದಾಗಿ ಕೊಚ್ಚಿಯ ಕಾಲೂರು ದಕ್ಷಿಣ, ಎಡಪಲ್ಲಿ, ಎಂ.ಜಿ.ರಸ್ತೆ, ದಕ್ಷಿಣ ರೈಲ್ವೇ ನಿಲ್ದಾಣ ರಸ್ತೆಯಲ್ಲಿ ನೀರು ತುಂಬಿಕೊಂಡಿದೆ. ತ್ರಿಪುಣಿತುರಾದಲ್ಲಿ ಮನೆಗಳಿಗೆ ನೀರು ನುಗ್ಗಿದೆ
ನಿನ್ನೆ ರಾತ್ರಿಯಿಂದ ತ್ರಿಶೂರ್ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಪೆರಿಂಗಲ್ಕುತ್ತು ಅಣೆಕಟ್ಟಿನ ನೀರಿನ ಮಟ್ಟ ಆರೆಂಜ್ ಅಲರ್ಟ್ ಮಟ್ಟಕ್ಕೆ ಏರಿದೆ. ಹೀಗಾಗಿ ಇಂದು ಬೆಳಗ್ಗೆ 9 ಗಂಟೆಯ ನಂತರ ಯಾವುದೇ ಸಮಯದಲ್ಲಿ ಡ್ಯಾಂ ತೆರೆಯುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ನಿಯಂತ್ರಣ ಕೊಠಡಿ ತಿಳಿಸಿದೆ. ಇಡುಕ್ಕಿಯ ನೆಡುಂಕಂಡಂನಲ್ಲಿ ಗಾಳಿ ಮಳೆಗೆ ಮರವೊಂದು ಮನೆಯೊಂದರ ಮೇಲೆ ಬಿದ್ದಿದೆ.
ಮುಂಗಾರು ಆರಂಭಕ್ಕೂ ಮುನ್ನವೇ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಅಣೆಕಟ್ಟುಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದು ಆತಂಕ ಮೂಡಿಸಿದೆ. ನಿನ್ನೆಯಷ್ಟೇ ಇಡುಕ್ಕಿ ಅಣೆಕಟ್ಟೆಗೆ 7 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆಗೆ ಬೇಕಾದ ನೀರು ಹರಿದು ಬಂದಿದೆ. ಇದೇ ವೇಳೆ ಸಮುದ್ರ ಪ್ರಕ್ಷುಬ್ಧವಾಗುವ ಸಾಧ್ಯತೆ ಇರುವುದರಿಂದ ಕರಾವಳಿ ಭಾಗದ ಜನರು ಎಚ್ಚರಿಕೆ ವಹಿಸಬೇಕು. ಕೇರಳ ಲಕ್ಷದ್ವೀಪದ ಕರಾವಳಿಯಲ್ಲಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ.