ಮುಳ್ಳೇರಿಯ: ಬಳವಂತೋಡು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ಎಸ್‍ಪಿಸಿ ಘಟಕದ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಪನತ್ತಡಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಪಿ.ಎಂ.ಕುರಿಯಾಕೋಸ್ ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ವಾರ್ಡ್ ಸದಸ್ಯ ಕೆ.ಕೆ.ವೇಣುಗೋಪಾಲ್, ಶಾಲಾ ಮುಖ್ಯೋಪಾಧ್ಯಾಯ ಕೆ.ಸುರೇಶ್, ಶಿಕ್ಷಕರು, ಪೋಲೀಸ್ ಅಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಪಂಚಾಯಿತಿ ಅಧಿಕಾರಿಗಳು, ವಿವಿಧ ಕ್ಲಬ್ ಸದಸ್ಯರು ಹಾಗೂ ಸ್ವಯಂ ಸೇವಕರು ಉಪಸ್ಥಿತರಿದ್ದರು.