ಶ್ರೀನಗರ: ಜಮ್ಮು- ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಇಂದು 35 ವರ್ಷದ ಟಿಕ್ ಟಾಕ್ ಕಲಾವಿದೆಯನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ದಾಳಿಯಲ್ಲಿ ಮಹಿಳೆಯ ಸೋದರಳಿಯ 10 ವರ್ಷದ ಬಾಲಕ ಕೂಡಾ ಗಾಯಗೊಂಡಿದ್ದಾನೆ.
ರಾತ್ರಿ 7.55ರ ಸುಮಾರಿನಲ್ಲಿ ಭಯೋತ್ಪಾದಕರು ಅಮ್ರೀನ್ ಭಟ್ ಎಂಬ ಮಹಿಳೆಯ ಮನೆಯ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಗಾಯಗೊಂಡ ಸ್ಥಿಯಲ್ಲಿದ್ದ ಆಕೆಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ಅಲ್ಲಿ ಆಕೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಮಹಿಳೆಯ ಸೋದರಳಿಯ ಫರ್ಹಾನ್ ಜುಬೈರ್ ಕೂಡಾ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದು, ದಾಳಿಕೋರರನ್ನು ಹಿಡಿಯಲು ಶೋಧ ಕಾರ್ಯ ಆರಂಭಿಸಿದ್ದಾರೆ.