ನವದೆಹಲಿ: ಚೆಕ್ ಬೌನ್ಸ್ ಪ್ರಕರಣಗಳ ತ್ವರಿತ ವಿಲೇವಾರಿಗೆ 5 ರಾಜ್ಯಗಳಲ್ಲಿ ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ವಿಶೇಷ ನ್ಯಾಯಾಲಯ ರಚಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿದೆ.
ನವದೆಹಲಿ: ಚೆಕ್ ಬೌನ್ಸ್ ಪ್ರಕರಣಗಳ ತ್ವರಿತ ವಿಲೇವಾರಿಗೆ 5 ರಾಜ್ಯಗಳಲ್ಲಿ ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ವಿಶೇಷ ನ್ಯಾಯಾಲಯ ರಚಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿದೆ.
ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್, ಬಿ.ಆರ್.ಗವಾಯಿ ಮತ್ತು ಎಸ್.ರವೀಂದ್ರ ಭಟ್ ಅವರನ್ನು ಒಳಗೊಂಡ ಪೀಠ, ಮಹಾರಾಷ್ಟ್ರ, ದೆಹಲಿ, ಗುಜರಾತ್, ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ದೊಡ್ಡ ಪ್ರಮಾಣದ ಚೆಕ್ ಬೌನ್ಸ್ ಪ್ರಕರಣಗಳ ವಿಚಾರಣೆ ಬಾಕಿ ಇದೆ.