ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಯಿಂದ ಜನತೆಗೆ ಉಂಟಾಗುವ ಸಮಸ್ಯೆಗಳನ್ನು ಪ್ರತಿನಿಧಿಗಳು ಸೇರಿದಂತೆ ಸಂಬಂಧಪಟ್ಟವರ ಸಭೆ ಕರೆದು ಕೂಲಂಕಷವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ಶಾಸಕ ಎನ್.ಎ ನೆಲ್ಲಿಕುನ್ನು ಆಗ್ರಹಿಸಿದ್ದಾರೆ.
ಚೆರ್ಕಳ ಪೇಟೆಯಲ್ಲಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆಯಿಂದ ಪೇಟೆ ಎರಡೂ ಪಾಶ್ರ್ವದ ಜನರು ಹಾಗೂ ವ್ಯಾಪಾರಿ ಸಂಸ್ಥೆಗಳು ಪ್ರತ್ಯೇಕಗೊಳ್ಳುವ ಸಾಧ್ಯತೆಯಿದೆ.
ಇಲ್ಲಿ ಸರ್ವಿಸ್ ರಸ್ತೆಯಿಲ್ಲದ ಆರು ಪಥದ ರಸ್ತೆ ಮತ್ತು ಜನರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗಲು ಸಾಧ್ಯವಾಗದಿರುವುದು ಅನಿರೀಕ್ಷಿತ ಮತ್ತು ಸ್ವೀಕಾರಾರ್ಹವಲ್ಲ ಎಂದು ಶಾಸಕರು ಪತ್ರದಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆಯಲ್ಲಿ 6 ಪಥದ ರಸ್ತೆ ನಿರ್ಮಾಣದಲ್ಲಿ ಆಗಿರುವ ಲೋಪ ಮತ್ತು ಆವಿಷ್ಕಾರಗಳ ಬಗ್ಗೆ ಶಾಸಕ ಎನ್.ಎ ನೆಲ್ಲಿಕುನ್ನು ಈಗಾಗಲೇ ಗಮನ ಸೆಳೆದಿದ್ದು, ಜಿಲ್ಲಾ ಅಭಿವೃದ್ಧಿ ಸಮಿತಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ಕರೆಯಲು ನಿರ್ಧರಿಸಿದೆ.