ಕಾಸರಗೋಡು: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 'ಮೈ ಕೇರಳ' ಪ್ರದರ್ಶನ ಮತ್ತು ಮಾರುಕಟ್ಟೆ ಮೇಳದಲ್ಲಿ ಜಿಲ್ಲೆಯ ಆಡಳಿತದ ಪ್ರಮುಖ ಮಹಿಳಾ ಅಧಿಕಾರಿಗಳು, ಜನಪ್ರತಿನಿಧಿಗಳ ಸಂಗಮ ಗಮನಸೆಳೆಯಿತು. 'ಜಿಲ್ಲಾಡಳಿತದ ನಾಯಕತ್ವ ಹೇಳುವುದೇನು'- ಎಂಬ ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಮಹಿಳಾ ಅಧಿಕಾರಿಗಳು, ಜನಪ್ರತಿನಿಧಿಗಳು ಪಾಳ್ಗೊಂಡು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಿಂದ ತೊಡಗಿ ಅಧಿಕಾರಿ ವರ್ಗದವರೆಗಿನ ಪ್ರಮುಖ ಮಹಿಳಾ ವ್ಯಕ್ತಿತ್ವಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಿಳೆಯರು ಆಡಳಿತ ಕ್ಷೇತ್ರದಲ್ಲಿ ಉತ್ತಮ ಕೊಡುಗೆ ನೀಡಬಹುದು ಎಂಬುದನ್ನು ಈ ಕಾರ್ಯಕ್ರಮ ನಿರೂಪಿಸಿತು. ತಾವು ನಡೆದುಬಂದ ಜೀವನದ ಹಾದಿ ಬಗ್ಗೆ ಅಧಿಕಾರಿಗಳು ಸಭೆಗೆ ವಿವರಿಸಿದರು. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಅಪರ ಜಿಲ್ಲಾಧಿಕಾರಿ ಡಿ.ಆರ್.ಮೇಘಶ್ರೀ, ಕಾಞಂಗಾಡು ನಗರಸಭೆ ಅಧ್ಯಕ್ಷೆ ಕೆ.ವಿ.ಸುಜಾತಾ, ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕೆ.ವಿ.ಪುಷ್ಪಾ, ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಶೀಬಾ ಮುಮ್ತಾಜ್,ಪ್ರಧಾನ ಕೃಷಿ ಅಧಿಕಾರಿ ಆರ್. ವೀಣಾ ರಾಣಿ, ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ ಎಸ್.ಮೀನಾ ರಾಣಿ, ಜಿಲ್ಲಾ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಅಧಿಕಾರಿ ಎಂ. ಮತ್ತು ಮಲ್ಲಿಕಾ ಸಂಗಮದಲ್ಲಿ ಪಾಲ್ಗೊಂಡರು.
ಚಿತ್ರ ಮಾಹಿತಿ: 'ಮೈ ಕೇರಳ' ಪ್ರದರ್ಶನ ಮತ್ತು ಮಾರುಕಟ್ಟೆ ಮೇಳದಲ್ಲಿ ಮಹಿಳಾ ಸಾರಥಿಗಳ ಸಂಗಮದಲ್ಲಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಅಪರ ಜಿಲ್ಲಾಧಿಕಾರಿ ಡಿ.ಆರ್.ಮೇಘಶ್ರೀ ಮುಂತಾದವರು ಪಾಲ್ಗೊಂಡಿದ್ದರು.