ಕೋಲ್ಕತ್ತ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಅರ್ಜುನ್ ಚೌರಾಸಿಯಾ ಅನುಮಾನಾಸ್ಪದ ಸಾವಿನ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗ್ರಹಿಸಿದ್ದಾರೆ.
ಕೋಲ್ಕತ್ತ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಅರ್ಜುನ್ ಚೌರಾಸಿಯಾ ಅನುಮಾನಾಸ್ಪದ ಸಾವಿನ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗ್ರಹಿಸಿದ್ದಾರೆ.
ಉತ್ತರ ಕೋಲ್ಕತ್ತದ ಕಾಶಿಪುರ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಚೌರಾಸಿಯಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಅಮಿತ್ ಶಾ ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿದ್ದು, ಶುಕ್ರವಾರ ಮಧ್ಯಾಹ್ನ ಚೌರಾಸಿಯಾ ಮನೆಗೆ ಭೇಟಿ ನೀಡಿದರು.
ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು, 'ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಬಿಜೆಪಿ ಬಯಸುತ್ತದೆ. ಮೂರನೇ ಬಾರಿ ಅಧಿಕಾರ ವಹಿಸಿಕೊಂಡ ವರ್ಷಾಚರಣೆಯನ್ನು ಟಿಎಂಸಿ ನಿನ್ನೆಯಷ್ಟೇ ಸಂಭ್ರಮಿಸಿತ್ತು. ಇದೀಗ ಚೌರಾಸಿಯಾ ಅವರ ಹತ್ಯೆಯಾಗಿದೆ' ಎಂದು ಹೇಳಿದ್ದಾರೆ.
'ಚೌರಾಸಿಯಾ ಸಾವನ್ನು ಕೇಂದ್ರ ಗೃಹ ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಈ ವಿಚಾರವಾಗಿ ರಾಜ್ಯದಿಂದ ವರದಿ ಕೇಳಿದೆ' ಎಂದೂ ಅವರು ತಿಳಿಸಿದ್ದಾರೆ.