ಕೀವ್: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುಣಪಡಿಸಲಾಗದ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ವರದಿಗಳ ನಡುವೆ, ಅವರು ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಆರೋಗ್ಯ ಗಂಭೀರವಾಗಿದೆ ಎಂದು ಸೋಮವಾರ ವರದಿಗಳು ತಿಳಿಸಿವೆ.
ಪುಟಿನ್ ರಕ್ತದ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ ಎಂದು ರಷ್ಯಾ ಅಧ್ಯಕ್ಷರೊಂದಿಗೆ ನಿಕಟ ಸಂಬಂಧ ಹೊಂದಿರುವ ಹೆಸರು ಹೇಳಲು ಇಚ್ಚಿಸದ ಸರ್ಕಾರದ ಪ್ರತಿನಿಧಿಯೊಬ್ಬರು ಹೇಳಿರುವುದಾಗಿ ಅಮೆರಿಕದ ನಿಯತಕಾಲಿಕೆ ವರದಿ ಮಾಡಿದೆ.
ಈಗಾಗಲೇ ಪುಟಿನ್ ಅವರನ್ನು ಪದಚ್ಯುತಗೊಳಿಸುವ ದಂಗೆ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಮಾಸ್ಕೋ ಯುದ್ಧವನ್ನು ನಿಲ್ಲಿಸಲಿದೆ ಎಂದು ಉಕ್ರೇನ್‌ನ ಬೇಹುಗಾರಿಕಾ ಮುಖ್ಯಸ್ಥರು ಹೇಳಿದ್ದಾರೆ.
ಈ ಬೇಸಿಗೆಯ ನಂತರ ರಷ್ಯಾ-ಉಕ್ರೇನ್ ಸಂಘರ್ಷ ಒಂದು ಮಹತ್ವದ ತಿರುವು ಪಡೆಯಲಿದೆ ಎಂದು ನಂಬಿದ್ದಾರೆ ಮತ್ತು ಅಂತಿಮವಾಗಿ ಪುಟಿನ್ ಅವರನ್ನು ಅಧಿಕಾರದಿಂದ ಕೇಳಗಿಳಿಸುವುದನ್ನು ನೋಡುವುದಾಗಿ ಮೇಜರ್ ಜನರಲ್ ಕೈರಿಲೋ ಬುಡಾನೋವ್ ಅವರು ಹೇಳಿರುವುದಾಗಿ ಡೈಲಿ ಮೇಲ್ ವರದಿ ಮಾಡಿದೆ.
ಉಕ್ರೇನ್ ವಿರುದ್ಧ ಯುದ್ಧ ಆರಂಭವಾದ ನಂತರ ರಷ್ಯಾ ಅಧ್ಯಕ್ಷರ ಅನಾರೋಗ್ಯದ ಕುರಿತಾಗಿ ಹಲವು ಊಹಾಪೋಹಗಳು ಹರಡುತ್ತಿವೆ. ಕಳೆದ ವಾರ ರಷ್ಯಾ ವಿಜಯ ದಿನಾಚರಣೆ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಪುಟಿನ್ ನಿಶಕ್ತರಾಗಿರುವಂತೆ ಕಂಡುಬಂದಿದ್ದರು. ಈ ಕುರಿತ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.