ನವದೆಹಲಿ: ದೆಹಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣ ವಿವಾದವನ್ನು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠಕ್ಕೆ ಸುಪ್ರೀಂ ಕೋರ್ಟ್ ವರ್ಗಾಯಿಸಿದೆ.
ನವದೆಹಲಿ: ದೆಹಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣ ವಿವಾದವನ್ನು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠಕ್ಕೆ ಸುಪ್ರೀಂ ಕೋರ್ಟ್ ವರ್ಗಾಯಿಸಿದೆ.
ರಾಷ್ಟ್ರ ರಾಜಧಾನಿಯ ಆಡಳಿತಾತ್ಮಕ ಸೇವೆಗಳ ಮೇಲಿನ ನಿಯಂತ್ರಣ ಸಾಧಿಸುವ ಸಂಬಂಧ ಕೇಂದ್ರ ಮತ್ತು ದೆಹಲಿ ಸರ್ಕಾರಗಳ ನಡುವೆ ಕಾನೂನಾತ್ಮಕ ಬಿಕ್ಕಟ್ಟು ಉದ್ಭವಿಸಿದೆ.
ಇದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಐವರು ನ್ಯಾಯಮೂರ್ತಿಗಳ ಪೀಠವು ಮೇ 11 ರಂದು ಕೈಗೆತ್ತಿಕೊಳ್ಳಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ದೆಹಲಿಯು ರಾಷ್ಟ್ರದ ರಾಜಧಾನಿ ಆಗಿರುವುದರಿಂದ ಇಲ್ಲಿನ ಆಡಳಿತಾತ್ಮಕ ಸೇವೆಗಳ ಮೇಲೆ ತಾನೇ ನಿಯಂತ್ರಣ ಹೊಂದುವ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ. ಇದಕ್ಕೆ ದೆಹಲಿ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.