ಮೊಹಾಲಿ: ಪಂಜಾಬ್ ಪೊಲೀಸ್‌ನ ಗುಪ್ತಚರ ಕೇಂದ್ರ ಕಚೇರಿಯಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದೆ.
ವರದಿಗಳ ಪ್ರಕಾರ, ಕಟ್ಟಡದ ಮೂರನೇ ಮಹಡಿಯಲ್ಲಿ ರಾಕೆಟ್ ಚಾಲಿತ ಗ್ರೆನೇಡ್ ಅನ್ನು ಎಸೆಯಲಾಗಿದೆ. ಏತನ್ಮಧ್ಯೆ, ಪೊಲೀಸರು ಆ ಪ್ರದೇಶದಲ್ಲಿ ಸುತ್ತುವರಿದಿದ್ದಾರೆ.
ಸ್ಫೋಟದ ತೀವ್ರತೆಗೆ ಕಟ್ಟಡದ ಕಿಟಕಿ ಗಾಜುಗಳು ಪುಡಿ ಪುಡಿಯಾಗಿದೆ. ಸ್ಫೋಟದಲ್ಲಿ ಯಾವುದೇ ರೀತಿಯ ಸಾವು ನೋವು ಸಂಭವಿಸಿಲ್ಲ. ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿದೆ. ಸ್ಫೋಟ ಸಂಬಂಧ ಮಾಹಿತಿ ನೀಡುವಂತೆ ಮುಖ್ಯಮಂತ್ರಿ ಭಗವಂತ್ ಮಾನ್ ಸೂಚಿಸಿದ್ದಾರೆ.