ಕಣ್ಣೂರು: ಕಣ್ಣೂರಿನ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರಿನ ಫಾದರ್ ಮುಲ್ಲರ್ಸ್ ಕಾಲೇಜಿನ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ.
ಮೃತಳನ್ನು ಕಣ್ಣೂರಿನ ಅಝಿಕೋಡ್ ನಿವಾಸಿ ಸಾಂದ್ರಾ (20) ಎಂದು ಗುರುತಿಸಲಾಗಿದೆ. ಸಾಂದ್ರಾ ಮೂರನೇ ವರ್ಷದ ಫಿಸಿಯೋಥೆರಪಿ ವಿದ್ಯಾರ್ಥಿನಿ. ಆತ್ಮಹತ್ಯೆ ಎಂಬುದು ಪ್ರಾಥಮಿಕ ತೀರ್ಮಾನವಾಗಿದೆ. ತನಗೆ ಹುಷಾರಿಲ್ಲ ಎಂದು ತರಗತಿಯಿಂದ ಹೊರಬಂದ ಸಾಂದ್ರಾ ನಂತರ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬುಧವಾರ ಮಧ್ಯಾಹ್ನದ ಸುಮಾರಿಗೆ ಈ ಘಟನೆ ನಡೆದಿದೆ.
ಸಾಯುವ ಮುನ್ನ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿಷ್ಕ್ರಿಯಗೊಳಿಸಿರುವುದು ಕಂಡುಬಂದಿದೆ. ಪೋಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.