ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,324 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 40 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಒಂದೇ ದಿನದಲ್ಲಿ 2,876 ಸೋಂಕಿತರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 19,092 ರಷ್ಟಾಗಿದೆ.
ಶನಿವಾರ ದಾಖಲಾದ ಪ್ರಕರಣಗಳ ಸಂಖ್ಯೆಗೆ (3,688) ಹೋಲಿಸಿದರೆ ಇಂದು ಶೇ 10ರಷ್ಟು ಪ್ರಕರಣಗಳು ಇಳಿಮುಖವಾಗಿವೆ.
ಈ ವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,23,843ಕ್ಕೆ ತಲುಪಿದೆ.