HEALTH TIPS

NEET PG EWS- ₹ 8 ಲಕ್ಷ ಆದಾಯ ಮಿತಿ: ಜುಲೈನಲ್ಲಿ ವಿಚಾರಣೆಗೆ ಸುಪ್ರೀಂ ಅಸ್ತು

        ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಲ್ಯುಎಸ್)ದ ನೀಟ್-ಪಿಜಿ ಪ್ರವೇಶಕ್ಕೆ 8 ಲಕ್ಷ ವಾರ್ಷಿದ ಆದಾಯದ ಮಾನದಂಡಗಳನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆಯನ್ನು ಜುಲೈ ತಿಂಗಳಲ್ಲಿ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

             ಈ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯಕಾಂತ್ ಮತ್ತು ಪಿ.ಎಸ್.ನರಸಿಂಹ ಅವರಿದ್ದ ಪೀಠವು, ಈ ವಿಚಾರವನ್ನು ಮೂವರು ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸಬೇಕಿದೆ. ಹೀಗಾಗಿ ಬೇಸಿಗೆ ರಜಾ ಅವಧಿಯಲ್ಲಿ ಈ ಅರ್ಜಿ ವಿಚಾರಣೆ ಅಸಾಧ್ಯ. ಬೇಸಿಗೆ ರಜೆ ಮುಗಿದ ಬಳಿಕ ಈ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.

               ನೀಟ್ ಅಭ್ಯರ್ಥಿಗಳ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅರವಿಂದ ದಾತಾರ್‌, '2022-23ನೇ ಸಾಲಿನ ನೀಟ್-ಪಿಜಿ ಪ್ರವೇಶವು ಶೀಘ್ರವೇ ಆರಂಭವಾಗಲಿದೆ. ಆದರೆ ಸರ್ಕಾರ ನಿಗದಿಪಡಿಸಿದ ಇಡಬ್ಲ್ಯುಎಸ್‌ಗಳ ವಾರ್ಷಿಕ ₹8 ಲಕ್ಷ ಆದಾಯವನ್ನು ಗುರುತಿಸುವಲ್ಲಿ ಮಾತ್ರವೇ ಸಮಸ್ಯೆಯಿದೆ. ಇದು ನೀಟ್ ಪ್ರವೇಶಕ್ಕೆ ಅನ್ವಯವಾಗಲಿದೆಯೇ' ಎಂದು ಪ್ರಶ್ನಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries