ಉಪ್ಪಳ: ಶ್ರೀಸತ್ಯಸಾಯಿ ಸೇವಾ ಸಮಿತಿ ಬಾಯಾರು ಹಾಗೂ ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಜೂ.19 ರಂದು ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30 ರ ವರೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ನೇತ್ರ ಪರೀಕ್ಷಾ ಶಿಬಿರ ನಡೆಯಲಿದೆ.
ಶಿಬಿರದಲ್ಲಿ ಗ್ಯಾಸ್ಟ್ರೋಎಂಟರಾಲಜಿ, ಸಾಮಾನ್ಯ ರೋಗ, ಮಕ್ಕಳ ಖಾಯಿಲೆ, ಕಿವಿ, ಮೂಗು, ಗಂಟಲು, ಎಲುಬು ಹಾಗೂ ನೇತ್ರ ತಜ್ಞರು ಶಿಬಿರದಲ್ಲಿ ತಪಾಸಣೆ ನಡೆಸಿ ಸೂಕ್ತ ಸಲಹೆ, ಔಷಧಿಗಳನ್ನು ಉಚಿತವಾಗಿ ನೀಡಲಿರುವರು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.