ಮಧೂರು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕø್ಕತಿಕ ಪ್ರತಿಷ್ಠಾನದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಮುಂದಿನ ಸಾರ್ವಜನಿಕ ಲೋಕಾರ್ಪಣೆಯವರೆಗೆ ಪ್ರತೀ ತಿಂಗಳ ಎರಡನೆ ಶನಿವಾರ ಮತ್ತು ಭಾನುವಾರ ಸರಣಿ ಕಲಾ ಸಾಂಸ್ಕø್ಕತಿಕ - ಸಾಹಿತ್ಯ ವೈಭವ ನಡೆಸಲು ತೀರ್ಮಾನಿಸಿದೆ. ಸರಣಿ ಕಾರ್ಯಕ್ರಮದ ಉದ್ಘಾಟನೆ ಜೂನ್ 26 ರಂದು ಸಿರಿಬಾಗಿಲು ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ. ಉದ್ಘಾಟನೆಯನ್ನು ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ನಡೆಸಲಿದ್ದಾರೆ. ಡಾ.ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಪ್ರಸಂಗಕರ್ತ ಶ್ರೀಧರ ಡಿ ಯಸ್, ಹಾಗೂ ವಿ. ರಾಘವೇಂದ್ರ ಉಡುಪ ನೇರಳೆಕಟ್ಟೆ ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ. ಉದ್ಘಾಟನಾ ಸಮಾರಂಭದ ಬಳಿಕ ಪ್ರತಿಷ್ಠಾನದ ವಿವಿಧ ಸಮಿತಿಗಳ ಸಮಾಲೋಚನಾ ಸಭೆ ನಡೆಯಲಿದೆ. ಸಂಜೆ 4 ಗಂಟೆಗೆ ಶ್ರೀ ಆಂಜನೇಯ ಯಕ್ಷಗಾನ ಮಹಿಳಾ ಸಂಘ ಬೊಳುವಾರು, ಪುತ್ತೂರು ಇವರಿಂದ ಶ್ರೀರಾಮ ಪಟ್ಟಾಭಿಷೇಕ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಮುಂದಿನ ತಿಂಗಳು ಎರಡನೇ ಶನಿವಾರ ಮತ್ತು ಭಾನುವಾರ ಸಾಂಸ್ಕøತಿಕ ಸರಣಿಕಾರ್ಯಕ್ರಮ ನಡೆಯಲಿದೆ ಎಂದು ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.