ಉತ್ತರಾಖಂಡ: 28 ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿ ಸುಮಾರು 22 ಮಂದಿ ಸಾವಿಗೀಡಾಗಿರುವಂಥ ದುರಂತವೊಂದು ಸಂಭವಿಸಿದೆ. ಉತ್ತರಾಖಂಡದ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ದಮ್ಟಾ ಎಂಬಲ್ಲಿ ಈ ಅಪಘಾತ ಸಂಭವಿಸಿದೆ.
ಉತ್ತರಾಖಂಡ: 28 ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿ ಸುಮಾರು 22 ಮಂದಿ ಸಾವಿಗೀಡಾಗಿರುವಂಥ ದುರಂತವೊಂದು ಸಂಭವಿಸಿದೆ. ಉತ್ತರಾಖಂಡದ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ದಮ್ಟಾ ಎಂಬಲ್ಲಿ ಈ ಅಪಘಾತ ಸಂಭವಿಸಿದೆ.
ಉತ್ತರಕಾಶಿಯ ಪುರೋಲದ ದಮ್ಟಾ ಎಂಬಲ್ಲಿ ಅಪಘಾತ ಸಂಭವಿಸಿದ ಹಲವಾರು ಮಂದಿ ಸಾವಿಗೀಡಾಗಿರುವುದು ದುರದೃಷ್ಟಕರ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಅಲ್ಲದೆ ಮಾಹಿತಿ ಸಿಕ್ಕ ತಕ್ಷಣ ರಕ್ಷಣಾ ಕಾರ್ಯಾಚರಣೆಗೆ ಆದೇಶ ನೀಡಲಾಗಿದ್ದು, ರಕ್ಷಣಾ ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಧಾಮಿ ಹೇಳಿದ್ದಾರೆ.
ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಹಾಗೇ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.