ನವದೆಹಲಿ: ರಾಜ್ಯಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ತನ್ನ ಮೂರೂ ಅಭ್ಯರ್ಥಿಗಳನ್ನು ರಾಜ್ಯಸಭೆಗೆ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದೆ.
ಜೆಡಿಎಸ್ ಪಕ್ಷ ಕಣಕ್ಕೆ ಇಳಿಸಿದ್ದ ಕುಪೇಂದ್ರ ರೆಡ್ಡಿ ಹಾಗೂ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮನ್ಸೂರ್ ಅಲಿ ಖಾನ್ ಗೆಲುವು ಸಾಧಿಸುವಲ್ಲಿ ವಿಫಲರಾಗಿದ್ದಾರೆ. ನಾಲ್ಕು ಸ್ಥಾನಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿಗೆ ಮೂರು ಸ್ಥಾನಗಳು ಸಿಕ್ಕಿದ್ದರೆ, ಕಾಂಗ್ರೆಸ್ ಪಕ್ಷ 4 ನೇ ಸ್ಥಾನವನ್ನು ಪಡೆದಿದೆ.
ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್ ಸಿಂಗ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೆ, ಕಾಂಗ್ರೆಸ್ ನಿಂದ ಜೈ ರಾಮ್ ರಮೇಶ್ ರಾಜ್ಯಸಭೆ ಪ್ರವೇಶಿಸಿದ್ದಾರೆ.