ವಿಶಾಖಪಟ್ಟಣಂ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ.
ವಿಶಾಖಪಟ್ಟಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 179 ರನ್ ಪೇರಿಸಿದ್ದು ದಕ್ಷಿಣ ಆಫ್ರಿಕಾಗೆ 180 ರನ್ ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 131 ರನ್ ಗಳಿಗೆ ಆಲೌಟ್ ಆಗಿದ್ದು 48 ರನ್ ಗಳಿಂದ ಸೋಲು ಕಂಡಿದೆ.
ದಕ್ಷಿಣ ಆಫ್ರಿಕಾ ಪರ ಬ್ಯಾಟಿಂಗ್ ಮಾಡಿದ್ದ ತೆಂಬಾ ಬವುಮಾ 8, ರೀಜಾ ಹೆಂಡ್ರಿಕ್ಸ್ 23, ಡ್ವೈನ್ ಪ್ರಿಟೋರಿಯಸ್ 20, ಹೆನ್ರಿಚ್ ಕ್ಲಾಸೆನ್ 29, ಪರ್ಲೆನ್ ಅಜೇಯ 22 ರನ್ ಬಾರಿಸಿದ್ದಾರೆ.
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಹರ್ಷಲ್ ಪಟೇಲ್ 4, ಯಜುವೇಂದ್ರ ಚಹಾಲ್ 3, ಭುವನೇಶ್ವರ್ ಕುಮಾರ್ ಮತ್ತು ಅಕ್ಷರ್ ಪಟೇಲ್ ತಲಾ 1 ವಿಕೆಟ್ ಪಡೆದಿದ್ದಾರೆ.
ಟೀಂ ಇಂಡಿಯಾ ಪರ ರಿತುರಾಜ್ ಗಾಯಕ್ವಾಡ್ 57, ಇಶಾನ್ ಕಿಶನ್ 54, ಶ್ರೇಯಸ್ ಅಯ್ಯರ್ 14, ಹಾರ್ದಿಕ್ ಪಾಂಡ್ಯ ಅಜೇಯ 31 ರನ್ ಬಾರಿಸಿದ್ದಾರೆ.
ದಕ್ಷಿಣ ಆಫ್ರಿಕಾ ಪರ ಬೌಲಿಂಗ್ ನಲ್ಲಿ ಡ್ವೈನ್ ಪ್ರಿಟೋರಿಯಸ್ 2, ರಬಾಡಾ, ಶಮ್ಸಿ ಮತ್ತು ಕೇಶವ್ ಮಹಾರಾಜ್ ತಲಾ 1 ವಿಕೆಟ್ ಪಡೆದಿದ್ದಾರೆ.