ನವದೆಹಲಿ: ಅಜರ್‌ಬೈಜಾನ್‌ನ ಬಾಕುನಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್‌ನಲ್ಲಿ ಭಾರತದ ಅನುಭವಿ ಶೂಟರ್ ಅಂಜುಮ್ ಮೌದ್ಗಿಲ್ ಅವರು ಶುಕ್ರವಾರ ಬೆಳ್ಳಿ ಪದಕ ಗಳಿಸಿದ್ದಾರೆ.
ಮಹಿಳೆಯರ 50 ಮೀಟರ್ ರೈಫಲ್ 3 ಪೊಸಿಷನ್ಸ್‌ನಲ್ಲಿ ಅಂಜುಮ್ ಮೌದ್ಗಿಲ್ ಅವರು ಬೆಳ್ಳಿ ಗೆಲ್ಲುವ ಮೂಲಕ ಭಾರತ ಪದಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದೆ.
ನಡೆದ ಫೈನಲ್ ಪಂದ್ಯದಲ್ಲಿ ಅಂಜುಮ್ ಅವರು 12–16ರಿಂದ ಡೆನ್ಮಾರ್ಕ್‌ನ ರಿಕ್ಕೆ ಮಯಿಂಗ್ ಇಬ್ಸೆನ್ ಅವರು ವಿರುದ್ಧ ಸೋಲು ಅನುಭವಿಸುವ ಮೂಲಕ ಬೆಳ್ಳಿಗೆ ತೃಪ್ತಿಪಟ್ಟರು.
ನಿನ್ನೆವಿಶ್ವ ಚಾಂಪಿಯನ್‌ಷಿಪ್ ಬೆಳ್ಳಿ ಪದಕ ವಿಜೇತೆಯಾಗಿರುವ ಅಂಜುಮ್, ರ‍್ಯಾಂಕಿಂಗ್ ಸುತ್ತಿನಲ್ಲಿ ಗುರುವಾರ 600ರ ಪೈಕಿ 587 ಪಾಯಿಂಟ್ಸ್ ಕಲೆಹಾಕಿದ್ದರು. 60 ಶೂಟರ್‌ಗಳ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದರು. ಅಂಜುಮ್ ಅವರಿಗೆ ವಿಶ್ವಕಪ್‌ನಲ್ಲಿ ಇದು ಎರಡನೇ ಬೆಳ್ಳಿ ಪದಕವಾಗಿದೆ. ಇದೇ ಸ್ಪರ್ಧೆಯಲ್ಲಿದ್ದ ಭಾರತದ ಆಯುಷಿ ಪೊದ್ದಾರ್ ಮತ್ತು ಆಶಿ ಚೌಕ್ಸಿ ಕ್ರಮವಾಗಿ 16 ಮತ್ತು 20ನೇ ಸ್ಥಾನ ಗಳಿಸಿದರು.