ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೂ 36 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೂ 36 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಡಿಯೊ ದೃಶ್ಯಾವಳಿಗಳನ್ನು ಜಾಲಾಡಿದ ಬಳಿಕ ಗಲಭೆಕೋರರನ್ನು ಸೆರೆ ಹಿಡಿಯಲಾಗಿದೆ ಎಂದು ಪೊಲೀಸ್ ಆಯುಕ್ತ ವಿಜಯ್ ಸಿಂಗ್ ಮೀನಾ ತಿಳಿಸಿದ್ದಾರೆ.
ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಇತ್ತೀಚೆಗೆ ಟಿ.ವಿ ಸಂವಾದದಲ್ಲಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಾಗಿ ಆರೋಪಿಸಲಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ಶುಕ್ರವಾರ ಕಾನ್ಪುರದ ವಿವಿಧ ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.