HEALTH TIPS

ಚೆನ್ನೈ: ವಿಮಾನದ ಶೌಚಾಲಯದಿಂದ ₹4.21 ಕೋಟಿ ಮೌಲ್ಯದ ಚಿನ್ನದ ಗಟ್ಟಿ ವಶ

 ಚೆನ್ನೈಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದ ವಿಮಾನವೊಂದರ ಶೌಚಾಲಯದಿಂದ ₹4.21 ಕೋಟಿ ಮೌಲ್ಯದ 60 ಚಿನ್ನದ ಗಟ್ಟಿಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಶನಿವಾರ ವಶಪಡಿಸಿಕೊಂಡಿದ್ದಾರೆ.

ಒಟ್ಟು 9 ಕೆ.ಜಿ.ಚಿನ್ನ ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ₹25.87 ಲಕ್ಷ ಮೌಲ್ಯದ ಚಿನ್ನದ ಕಡ್ಡಿಗಳನ್ನು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಬಂದ 61 ವರ್ಷದ ಪ್ರಯಾಣಿಕರೊಬ್ಬರನ್ನು ಈ ಸಂಬಂಧ ಬಂಧಿಸಲಾಗಿದೆ. ಇವರು ತಮಿಳುನಾಡಿನ ಪುದುಕೋಟೆ ಜಿಲ್ಲೆಯವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries